'ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ'; ಸಿ.ಟಿ. ರವಿ ಸವಾಲಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ

bjp
siddaramaiah slams st ravi
Published on

ಬೆಂಗಳೂರು: ಭಾರತೀಯ ಆಹಾರ ನಿಗಮ(FCI) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರವನ್ನು ರಾಜ್ಯ ಸರ್ಕಾರ ತೋರಿಸಲಿ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ(CT Ravi) ಸವಾಲು ಹಾಕಿದ್ದರು.

ಸಿ.ಟಿ. ರವಿ ಸವಾಲಿಗೆ ಉತ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), "ಭಾರತೀಯ ಆಹಾರ ನಿಗಮ(ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ ಸಿ.ಟಿ. ರವಿ ಸವಾಲು ಹಾಕಿದ್ದರು. ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು" ಎಂದು ಹೇಳಿದ್ದಾರೆ.

"ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ" ಎಂದು ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ ತೋರಿಸುವ ಮೂಲಕ ಸಿ.ಟಿ. ರವಿ ಅವರಿಗೆ ಸಿಎಂ ತಿರುಗೇಟು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net