ಕೆಲ ಅಧಿಕಾರಿಗಳು ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ, ಧರ್ಮಕ್ಕೂ ಆಡಳಿತಕ್ಕೂ ಸಂಬಂಧವಿಲ್ಲ: ಸಿದ್ದರಾಮಯ್ಯ

SIDDARAMAIAH
Published on

ಬೆಂಗಳೂರು: ನನಗೆ ಸಮಾಜ ಏನು ಮಾಡಿದೆ ಅನ್ನುವುದಕ್ಕಿಂತ ನಾವು ಸಮಾಜಕ್ಕೆ ಏನು ಮಾಡಿದ್ದೇವೆ ಎನ್ನುವುದು ಬಹಳ ಮುಖ್ಯ. ನಮಗೆಲ್ಲಾ ಸಮಾಜವನ್ನು ಸುಧಾರಣೆ ಮಾಡುವ ಜವಾಬ್ದಾರಿ ಇದೆ. ಸಮಾಜದಲ್ಲಿ ಇನ್ನೂ ಕೂಡ ಅಸಮಾನತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಧಿಕಾರಿಗಳು ಪ್ರಾಮಾಣಿಕವಾಗಿ ಜನರ ಪರ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಆದರೆ ಕೆಲ ಅಧಿಕಾರಿಗಳು ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಅಧಿಕಾರಿಗಳು ಧರ್ಮಕಾರ್ಯದಲ್ಲಿ ತೊಡಗಿಕೊಳ್ಳುವ ಕೆಲಸ ಮಾಡಬಾರದು. ಧರ್ಮಕ್ಕೂ ಆಡಳಿತಕ್ಕೂ ಸಂಬಂಧವಿಲ್ಲ. ಅಧಿಕಾರಿಗಳು ಧರ್ಮಕಲಹದಲ್ಲಿ ತೊಡಗಿಸಿಕೊಳ್ಳಬಾರದು, ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ 5 ನೇ ಗ್ಯಾರಂಟಿ ಯೋಜನೆಗೆ ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳು ನೀಡಿರುವ ಬೇಡಿಕೆ ಈಡೇರಿಕೆ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net