ಅಕ್ಷರಗಳು ಎಡಬಿಡದೆ ಸೇರುವುದೇ ಸಂಧಿ; ಸಿಎಂ ವ್ಯಾಕರಣ ಪಾಠಕ್ಕೆ ವಿದ್ಯಾರ್ಥಿಗಳು ಖುಷ್​

ವಿಜಯವಾಣಿ-2024-07-05T162717.382
Published on

ಬೆಂಗಳೂರು: ಇಂದು ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 250 ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಮೊದಲಿಗೆ 10 ನೇ ತರಗತಿಗೆ ಭೇಟಿ ಕೊಟ್ಟ ಸಿಎಂ ಮತ್ತು ಸಚಿವರು, ಬಳಿಕ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಸಂದಿ ಎಂದರೇನು, ಸಂಧಿಗಳಲ್ಲಿ ಎಷ್ಟು ವಿಧ, ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ, ಅವುಗಳಲ್ಲಿ ಯೋಗವಾಹಗಳು ಎಷ್ಟು, ಸ್ವರ, ವ್ಯಂಜನಗಳು ಎಂದರೇನು, ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ, ಮಕ್ಕಳ ಉತ್ತರಗಳನ್ನು ತಿದ್ದಿ ಅವರಿಗೆ ಅರ್ಥೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net