ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ…. ಸಿಎಂ ವ್ಯಂಗ್ಯ

WhatsApp Image 2024-03-24 at 8.18.38 PM
Published on

ಚಾಮರಾಜನಗರ: ಇಂದು ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಈ ಹಿಂದೆ ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ತಮ್ಮ ಅಳಿಯ ಮಂಜುನಾಥ್​ರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ವ್ಯಂಗ್ಯವಾಡಿದರು.

ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ರಾಜ್ಯದ ಜನರಿಗೆ ಉಚಿತವಾಗಿ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ನಮಗೆ ಅಕ್ಕಿ ಕೊಡಿ ಅಂದರೂ ಕೇಂದ್ರ ಬಿಜೆಪಿ ಸರ್ಕಾರ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net