ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಆದೇಶ; ಹೈಕೋರ್ಟ್​ ಮೆಟ್ಟಿಲೇರಲು ಸಿದ್ದು ಪರ ವಕೀಲರ ಸಿದ್ಧತೆ

Siddaramaiah Gehlot
Published on

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ತಲ್ಲಣವನ್ನುಂಟು ಮಾಡಿದೆ. ಇತ್ತ ರಾಜ್ಯಪಾಲರ ನಡೆಗೆ ಕಾಂಗ್ರೆಸ್​ ನಾಯಕರು ಕೌಂಟರ್​ ಕೊಡಲು ಸಜ್ಜಾಗಿದ್ದು, ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಸಂಬಂಧ ಸಿಎಂ ಸಿದ್ದರಾಮಯ್ಯ ಅಡ್ವೊಕೇಟ್ ಜನರಲ್ ಜತೆ ಸಮಾಲೋಚನೆ ನಡೆಸುತ್ತಿದ್ದು, ಇದರ ಭಾಗವಾಗಿ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಭೆ ನಡೆಸಿದ್ದಾರೆ. ಮುಂದೆ ಯಾವ ರೀತಿ ಹೋರಾಡಬೇಕು ಎಂಬ ಕುರಿತು ಸುದೀರ್ಘವಾಗಿ ಚರ್ಚೆ ನಡೆಸುತ್ತಿದ್ದಾರೆ.

Siddaramaiah Gehlot

ರಾಜ್ಯಪಾಲರ ಪ್ರಾಸಿಕ್ಯೂಷನ್​ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಸಿಎಂ ಪರ ವಕೀಲರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸೋಮವಾರವೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲು ಯೋಜನೆ ಹಾಕಿಕೊಂಡಿದ್ದಾರೆ. ರಾಜ್ಯಪಾಲರ ಅನುಮತಿ ವಿರುದ್ಧ ಹೈಕೋರ್ಟ್​ನಲ್ಲಿ ಪ್ರಶ್ನಿಸಲು ತೀರ್ಮಾನ ಮಾಡಿದ್ದು, ಕಾನೂನು ಸಲಹೆಯಂತೆ ನ್ಯಾಯಾಲಯದಲ್ಲಿ‌ ಪ್ರಶ್ನಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಲು ನಿರ್ಧಾರ ಮಾಡುತ್ತಿದ್ದಂತೆಯೇ ದೂರು ದಾರ ಪ್ರದೀಪ್ ಕೇವಿಯಟ್ ಸಲ್ಲಿಸಲು ಮುಂದಾಗಿದ್ದಾರೆ. ತಮ್ಮ ವಾದ ಆಲಿಸದೇ ಈ ಕೇಸ್‌ನಲ್ಲಿ ಮಧ್ಯಂತರ ಆದೇಶ ನೀಡದಂತೆ ಕೇವಿಯಟ್ ಸಲ್ಲಿಸಲು ಸಜ್ಜಾಗಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ವಾದವೇ ಬೇರೆಯಾಗಿದೆ. ಪ್ರಕರಣ ಹೊರಬಂದ ದಿನದಿಂದಲೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡುತ್ತಾ ಬಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net