ಏ.12ರಂದು ಕೊಳ್ಳೇಗಾಲಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

10-KGLPHOTO-5,
Published on

ಕೊಳ್ಳೇಗಾಲ: ಪಟ್ಟಣಕ್ಕೆ ಏ.12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮತ್ತು ಹನೂರು ಕ್ಷೇತ್ರದ ಮಾಜಿ ಶಾಸಕ ಆರ್.ನರೇಂದ್ರ ಮಂಗಳವಾರ ಹೆಲಿಪ್ಯಾಡ್ ಸ್ಥಳ ಪರಿಶೀಲಿಸಿದರು.

ಪಟ್ಣಣದ ಎಂಜಿಎಸ್‌ವಿ ಜೂನಿಯರ್ ಕಾಲೇಜಿನಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರಚಾರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಗಾಣಪುರದ ಹೊರವಲಯದಲ್ಲಿ ಹ್ಯಾಲಿಪ್ಯಾಡ್ ಸ್ಥಳ ಹಾಗೂ ವೇದಿಕೆ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.

ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು 10 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಸಮಾವೇಶವನ್ನು ಸುವ್ಯವಸ್ಥಿತವಾಗಿ ಮಾಡುವಂತೆ ಸಂಬಂಧಪಟ್ಟವರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಸೂಚಿಸಿದರು. ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ರಾಜ್ಯ ಯುವ ಕಾರ್ಯದರ್ಶಿ ಚೇತನ್ ದೊರೈರಾಜ್, ಮುಖಂಡರಾದ ಓಲೆ ಮಹದೇವ, ಕೇಶವ್ ಮೂರ್ತಿ, ರಾಜೇಂದ್ರ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net