

ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಹಿರಿಯರಾದ ಎಸ್.ಎಂ ಕೃಷ್ಣ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹಾರೈಸಿದರು.
ಏಪ್ರಿಲ್ 22ರಂದು ಎಸ್ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್ ಆಗಿದ್ದರು. ಏಪ್ರಿಲ್ 29 ರಂದು ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.