ಸಿಎಂ ಸಿದ್ದರಾಮಯ್ಯ ಜನ್ಮದಿನ ಅರ್ಥಪೂರ್ಣ

CM Siddaramaiah
Published on


ಮೈಸೂರು:
ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನವನ್ನು ವಯನಾಡಿನ ಸಂತ್ರಸ್ತರಿಗೆ ದಿನಬಳಕೆ ವಸ್ತುಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಎನ್.ಆರ್.ಮೊಹಲ್ಲಾದ ಶಿವಾಜಿ ರಸ್ತೆಯ ಶ್ರೀನಿವಾಸ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಲೀಕ ಗಂಧನಹಳ್ಳಿ ವೆಂಕಟೇಶ್ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನವನ್ನು ಶನಿವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಮ್ಮ ನಡೆ ಕೇರಳದ ವಯನಾಡಿನ ಸಂತ್ರಸ್ತರ ಕಡೆ ಎಂಬ ಘೋಷವಾಕ್ಯದೊಂದಿಗೆ 1 ಲಕ್ಷ ರೂ.ಮೌಲ್ಯದ ದಿನನಿತ್ಯ ವಸ್ತುಗಳನ್ನು ಸಂತ್ರಸ್ತರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಗಂಧನಹಳ್ಳಿ ವೆಂಕಟೇಶ್ ಮಾತನಾಡಿ, ಜನರಿಗೆ ಸಮಸ್ಯೆ ಮತ್ತು ಸಂಕಷ್ಟ ಎದುರಾದಾಗ ನಮ್ಮ ಆಸ್ಪತ್ರೆಯಿಂದ ಅಗತ್ಯ ಸಹಕಾರ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ವಯನಾಡಿನ ಭೂಕುಸಿತ ಸಂತ್ರಸ್ತರಿಗೆ 1 ಲಕ್ಷ ರೂ. ಮೌಲ್ಯದ ಅಗತ್ಯ ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ. ಸರ್ಕಾರ ಜತೆಯಲ್ಲಿ ಸಂ, ಸಂಸ್ಥೆಗಳು, ಸಾರ್ವಜನಿಕರು ಮಳೆ ಸಂತ್ರಸ್ತರಿಗೆ ಸಹಕಾರ ನೀಡಿದಾಗ ಪರಿಹಾರ ಸುಲಭವಾಗಲಿದೆ ಎಂದರು.
ಮನುಷ್ಯ ಕಷ್ಟದಲ್ಲಿದ್ದಾಗ ಮಾನವೀಯತೆ ಅರಿತ ವ್ಯಕ್ತಿಗಳು ಸಹಾಯ ವಾಡುವುದು ಮನುಕುಲದ ಧರ್ಮ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನ ಅರ್ಥಪೂರ್ಣವಾಗಿ, ಯಾವುದೇ ದುಂದುವೆಚ್ಚ ವಾಡದೇ ಕೇರಳದ ವಯನಾಡು ಪ್ರಕತಿ ವಿಕೋಪದಿಂದಾಗಿ ತೊಂದರೆಯಲ್ಲಿರುವ ಜನರ ನೆರವಿಗಾಗಿ ದಿನಬಳಕೆ ಮತ್ತು ಅಗತ್ಯ ಔಷಧಗಳನ್ನು ಕಳಿಸಿಕೊಡುತ್ತಿದ್ದೇವೆ ಎಂದರು.
ಕೆಪಿಸಿಸಿ ಸದಸ್ಯ ನದರಬಾದ್ ನಟರಾಜ್, ವೈದ್ಯರಾದ ಕಮಲಮ್ಮ, ಸುಮಂತ್, ಯುವರಾಜ್, ತೇಜಸ್, ಗುರುರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net