ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ: ಸಿಎಂ ವಿಶ್ವಾಸ | CM

cm
Published on

ಬೆಂಗಳೂರು: ಇಂದು ರಾಜಧಾನಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), "ಶಕ್ತಿ ಯೋಜನೆ ಪರಿಷ್ಕರಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ". ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ ಎಂದು ಗಟ್ಟಿಯಾಗಿ ಹೇಳಿದರು.

"ವಕ್ಫ್ ಆಸ್ತಿ ನೋಟೀಸ್​ಗಳಿಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ. ತಮ್ಮ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್​ಗಳನ್ನು ನೀಡಿದ್ದಾರೆ. ಇದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟಿಸ್​ ಅನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ" ಎಂದು ಭರವಸೆ ಮಾತುಗಳನ್ನಾಡಿದರು.

"ನವೆಂಬರ್ 4ರ ಅವರ ಪ್ರತಿಭಟನೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆ ಕಡೆ ಅವರೇ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ?" ಎಂದು ಬಿಜೆಪಿ ನಾಯಕರ ಮಾತುಗಳಿಗೆ ತಿರುಗೇಟು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net