ವಿವಿಧ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ ಇಂದು

Oplus_16908288
ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸಿದರು.
Published on

ನಂಜನಗೂಡು: ಮೈಸೂರಿನಲ್ಲಿ ಜು.19ರಂದು ನಡೆಯುವ ಸಾಧನಾ ಸಮಾವೇಶದಲ್ಲಿ 2500 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು.

ತಾಲೂಕಿನ ಬಸವಟ್ಟಿಗೆ, ಹೆಮ್ಮರಗಾಲ, ನೇರಳೆ, ಹಂಪಾಪುರ, ಹಳೇಪುರ, ತರದಲೆ, ಬಾಗೂರು ಗ್ರಾಮಗಳಲ್ಲಿ ರಸ್ತೆ, ಚರಂಡಿ, ಶೌಚಗೃಹ ಸೇರಿದಂತೆ 1.97 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಮಹತ್ವವನ್ನು ನೀಡುತ್ತಿದೆ. ಸಾಧನಾ ಸಮಾವೇಶದಲ್ಲಿ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ನಂತರ ಅಭಿವೃದ್ಧಿ ಪರ್ವ ಪ್ರಾರಂಭಗೊಳ್ಳಲಿದೆ. ಜು. 31ರಂದು ನಂಜನಗೂಡಿನಲ್ಲಿ ಉದ್ಯೋಗ ಮೇಳ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ದೊರೆಸ್ವಾಮಿ ನಾಯಕ, ಶಿವಪ್ಪ ದೇವರು, ಉಪ್ಪಿನಹಳ್ಳಿ ಶಿವಣ್ಣ, ರಂಗಸ್ವಾಮಿ, ಸೋಮು, ರಂಗದಾಸು, ಮಹೇಶ್, ನಾಗೇಂದ್ರ, ಹೆಡತಲೆ ರಾಜು, ಆನಂದ್, ಬಸವಟ್ಟಿಗೆ ನಾಗೇಂದ್ರ, ಸಿದ್ದಪ್ಪ, ವೀರಭದ್ರ ಕೆ., ನೇರಳೆ ಗ್ರಾಪಂ ಅಧ್ಯಕ್ಷ ಗಿರೀಶ್, ರಾಜು, ಹೆಡತಲೆ ಆನಂದ್, ಕೃಷ್ಣಮೂರ್ತಿ , ಬಸವರಾಜಪ್ಪ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net