

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ.12ರಂದು ಚಾಮರಾಜನಗರ ಮತ್ತು ಹನೂರು ತಾಲೂಕುಗಳಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 1 ಗಂಟೆಗೆ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.
ವಸತಿ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ ನಾರಾಯಣ, ಸಾರಿಗೆ ಸಚಿವ ವಿ.ಶ್ರೀರಾಮುಲು, ಕಂದಾಯ ಸಚಿವ ಆರ್.ಅಶೋಕ್, ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ, ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಬಿ ಚೌವ್ಹಾಣ್, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ, ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್, ನಗರಾಭಿವೃದ್ಧಿ ಇಲಾಖೆ ಸಚಿವ ಬಿ.ಎ. ಬಸವರಾಜ(ಭೈರತಿ), ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್, ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ, ಇಂಧನ ಇಲಾಖೆ ಸಚಿವ ವಿ.ಸುನೀಲ್‌ಕುಮಾರ್ ಭಾಗವಹಿಸುವರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶಾಸಕ ಆರ್.ನರೇಂದ್ರ ಹನೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಸಿ.ಎಸ್.ನಿರಂಜನ್‌ಕುಮಾರ್, ಎನ್.ಮಹೇಶ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ, ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ನಿಜಗುಣರಾಜು, ವಿಧಾನ ಪರಿಷತ್ತಿನ ಸದಸ್ಯ ಮಧು ಜಿ.ಮಾದೇಗೌಡ, ಚಾಮರಾಜನಗರ ನಗರಸಭೆ ಸದಸ್ಯ ಚಂದ್ರಶೇಖರ್, ಹನೂರು ಪಟ್ಟಣ ಪಂಚಾಯಿತಿ ಸದಸ್ಯ ಪವಿತ್ರ ಪಾಲ್ಗೊಳ್ಳುವರು.