ಕರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಸಿಎಂ ಯಡಿಯೂರಪ್ಪ; ಆಸ್ಪತ್ರೆಯಿಂದ ಡಿಸ್​ಚಾರ್ಜ್​

Yediyurappa Discharged
Published on

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಕರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇಂದು ಮಣಿಪಾಲ್​ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ.

ಆಗಸ್ಟ್​ 2ರಂದು ಬಿಎಸ್​ವೈ ಅವರಲ್ಲಿ ಕರೊನಾ ದೃಢಪಟ್ಟಿತ್ತು. ಅವರು ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ವೈರಸ್​​ನ ಯಾವುದೇ ಲಕ್ಷಣಗಳು ಇರಲಿಲ್ಲ. ಆಸ್ಪತ್ರೆಗೆ ಅಡ್ಮಿಟ್​ ಆಗಿ 9 ದಿನಗಳ ಬಳಿಕ ಇಂದು ಡಿಸ್​ಚಾರ್ಜ್​ ಆಗಿದ್ದಾರೆ.

ಯಡಿಯೂರಪ್ಪನವರಿಗೆ ನಿನ್ನೆ ಕೊವಿಡ್​-19 ಟೆಸ್ಟ್​ ಮಾಡಲಾಗಿತ್ತು. ವರದಿ ನೆಗೆಟಿವ್​ ಎಂದು ಬಂದಿತ್ತು. ಆದರೂ ಮತ್ತೆರಡು ದಿನ ಆಸ್ಪತ್ರೆಯಲ್ಲೇ ಇದ್ದು, ನಾಳೆ (ಆಗಸ್ಟ್​ 11) ಡಿಸ್​ಚಾರ್ಜ್​ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಸಿಎಂ ಇಂದೇ ಆಸ್ಪತ್ರೆಯಿಂದ ತೆರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net