

ಬೆಂಗಳೂರು: ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್ಡೌನ್ ಜಾರಿ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ನಾಯಕರು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತಲೇ ಇದ್ದಾರೆ. ಆದರೆ, ಇದಕ್ಕೆ ಮನ್ನಣೆ ನೀಡದ ಸಿಎಂ ಬಿ.ಎಸ್. ಯಡಿಯೂರಪ್ಪ, ಇಡೀ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಯೇ ಮುಖ್ಯ ಎಂದಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸರ್ವಪಕ್ಷಗಳ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದೇನೆ. ಕೋವಿಡ್ ಸೋಂಕು ತಡೆಯೋಕೆ ಶಾಸಕರ ಅಭಿಪ್ರಾಯ ಮುಖ್ಯ ಎಂದಿರುವ ಸಿಎಂ ಬಿಎಸ್ವೈ, ಮತ್ತೊಮ್ಮೆ ಬೆಂಗಳೂರನ್ನು ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಇದನ್ನೂ ಓದಿರಿ ಕಿರುಕುಳಕ್ಕೆ ಬೇಸತ್ತ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಗೃಹ ಕಚೇರಿ ಮುಂದೆ ಧರಣಿ
ಇಂದು ಮಧ್ಯಾಹ್ನ ನಡೆಯುವ ಸರ್ವಪಕ್ಷಗಳ ಸಭೆಯಲ್ಲಿ ಶಾಸಕರು ಮತ್ತು ಸಚಿವರು ನೀಡುವ ಸಲಹೆ ಆಧಾರದ ಮೇಲೆ ಬೆಂಗಳೂರಿನಲ್ಲಿ ಕರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ವಿಪಕ್ಷಗಳ ಸಲಹೆ ಪಡೆದು ಮುಂದುವರಿಯುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ಆದರೆ, ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗೋದೇ ಮುಖ್ಯ. ಯಾವುದೇ ಕಾರಣಕ್ಕೂ ಲಾಕ್ಡೌನ್ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.