

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜತೆಗೆ ಇತ್ತೀಚೆಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದ ಮೊಮ್ಮಗ(CM Grandson ) ಧವನ್ ರಾಕೇಶ್, ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರ 3ನೇ ತಲೆಮಾರಿನ ಕುಡಿ ಸದ್ಯದಲ್ಲೇ ರಾಜಕೀಯಕ್ಕೆ ಪದಾರ್ಪಣೆ ಮಾಡುವ ಲಕ್ಷಣಗಳಿವೆ.
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಜತೆಗಿನ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ರಾಜಕೀಯ ಬಗೆಗಿನ ಒಲವು ವ್ಯಕ್ತಪಡಿಸಿದ್ದಾರೆ. ಆರ್ಸಿಬಿ ವಿಜಯೋತ್ಸವ ಮತ್ತು ಕುರುಬ ಸಮಾಜದ ಅಭಿನಂದನಾ ಸಮಾರಂಭದಲ್ಲಿ ತಾತ ಸಿದ್ದರಾಮಯ್ಯ ಅವರೊಂದಿಗೆ ಕಾಣಿಸಿಕೊಂಡು ಚರ್ಚೆಗೆ ಒಳಗಾಗಿದ್ದ ಧವನ್, ಅವರಿಗೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ದೊರೆಯಿತು.
ಪ್ರಾಮಾಣಿಕ ನಾಯಕರನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿ ಆಗಲು ಬಯಸುತ್ತೇನೆ ಎಂಬುದನ್ನು ತಾತ ಗುರುತಿಸಿದ್ದರಿಂದ ಸಾಧ್ಯವಾಯಿತು. ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಕಡೆಗಣಿಸಲಾಗಿದೆ. ವಲಯದಲ್ಲಿ ಬಹುತೇಕ ಆದರೆ, ಇದೇ ಪ್ರಾಮಾಣಿಕವಾಗಿರಲು ಯತ್ನಿಸುವ, ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ಇಚ್ಛಿಸುತ್ತೇನೆ ಎಂದು ಮಾತು ಹಂಚಿಕೊಂಡಿದ್ದಾರೆ.
ರಾಜಕಾರಣವು ನನ್ನ ಬದುಕಿನ ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ನಂಬಿಕೆ ಮತ್ತು ಸಿದ್ದಾಂತದ ಪರ ನಿಲ್ಲಲು ರಾಹುಲ್ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು, ವಿಭಿನ್ನ ಅನುಭವವಾಗಿತ್ತು. ಅವರೊಂದಿಗೆ ಸ್ವಲ್ಪ ಕ್ಷಣ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ಅವರ ಜತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ. ಈಗ ನಾವೆಲ್ಲರೂ ಹೆಚ್ಚು ಜಾಗೃತರಾಗಬೇಕಿದೆ.
ಸತ್ಯ, ನಿಷ್ಠೆ, ಪಾರದರ್ಶಕತೆಯ ಮೂಲಕ ದೇಶ ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ಗಾಂಧಿ ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವೂ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.