

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಒಂದು ದಿನ ಮುಂದೂಡಲಾಗಿದೆ.
ನಿಗದಿಯಂತೆ ಸೆ. 2 ರಂದು ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಬೇಕಿತ್ತು. ಇದೀಗ ಸೆ.2 ರಂದು ರಾತ್ರಿ 7.25 ಕ್ಕೆ ಮೈಸೂರು ನಗರಕ್ಕೆ ಆಗಮಿಸುವ ಅವರು ಮೈಸೂರಿನಲ್ಲಿ ವಾಸ್ತವ್ಯ ಇರಲಿದ್ದಾರೆ. ಸೆ. 3 ರಂದು ಬೆಳಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಬೆಳಗ್ಗೆ 10.30ಕ್ಕೆ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ನಡೆಯಲಿರುವ ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಾಸಿಕ್ಯೂಷನ್ ವಿಚಾರಣೆಯನ್ನು ಮುಂದೂಡಿರುವ ಕಾರಣ ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮನ್ನು ಒಂದು ದಿನ ಮುಂದೂಡಲಾಗಿದೆ ಎನ್ನಲಾಗಿದೆ.