ಸಮ ಸಮಾಜ ನಿರ್ಮಾಣಕ್ಕೆ ಸಹಕಾರ ಅಗತ್ಯ

26 KRN-3
????????????????????????????????????
Published on

ಕೆ.ಆರ್.ನಗರ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣಕ್ಕೆ ಆಡಳಿತ ವರ್ಗ, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಶಾಸಕ ಡಿ.ರವಿಶಂಕರ್ ಕೋರಿದರು.


ಪಟ್ಟಣದ ಡಾ.ರಾಜ್‌ಕುಮಾರ್ ಬಾನಂಗಳದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆಯಿಂದ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಅದನ್ನು ಅರಿತಿರುವ ನಮ್ಮ ಸರ್ಕಾರ ಅದನ್ನು ಅನುಷ್ಠಾನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಸಮಾನತೆ, ಧರ್ಮ, ಭಾಷೆ, ಸರ್ವ ಸಮುದಾಯಗಳು ಒಪ್ಪುವಂತಹ, ಸಮಾನತೆಯಿಂದ ಬದುಕು ನಡೆಸುವಂತಹ ಸಂವಿಧಾನ ರಚಿಸಿಕೊಟ್ಟ ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.


ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತಂದಿದ್ದು ನಾವು ನುಡಿದಂತೆ ನಡೆದಿದ್ದೇವೆ. ಕ್ಷೇತ್ರದ ವ್ಯಾಪ್ತಿಯ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಪ್ರತಿಯೊಬ್ಬ ರೈತರು ತಪ್ಪದೆ ಎಫ್‌ಐಡಿ ನೋಂದಣಿ ಮಾಡಿಸಿ ಸವಲತ್ತು ಪಡೆಯಬೇಕು ಎಂದು ತಿಳಿಸಿದರು.


ತಾಲೂಕು ನಾಡ ಹಬ್ಬಗಳ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ತಾಲೂಕು ಪಂಚಾಯಿತಿ ಇಒ ಜಿ.ಕೆ.ಹರೀಶ್ ವಿಶೇಷ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಉಪನ್ಯಾಸಕ ಡಿ.ಶ್ರೀನಿವಾಸ್, ಪ್ರಸೂತಿ ತಜ್ಞೆ ಡಾ.ದಿವ್ಯತಾ, ಶಿರಸ್ತೇದಾರ್ ಅಸ್ಲಂಭಾಷಾ, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಕಾಶ್, ದಲಿತ ಮುಖಂಡ ನಂಜಯ್ಯ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.


ವಿಧಾನಪರಿಷತ್ ಮಾಜಿ ಸದಸ್ಯ ಟಿ.ಕೆ.ಚಿನ್ನಸ್ವಾಮಿ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್, ಸದಸ್ಯರಾದ ಪ್ರಕಾಶ್, ಶಂಕರ್‌ಸ್ವಾಮಿ, ನಟರಾಜು, ಕೆ.ಬಿ.ವೀಣಾ ವೃಷಭೇಂದ್ರಪ್ಪ, ಟಿಎಪಿಸಿಎಂಎಸ್ ನಿರ್ದೇಶಕ ಡಿ.ಸಿ.ರವಿ, ಪುರಸಭೆ ಮುಖ್ಯಾಧಿಕಾರಿ ಡಾ.ಜಯಣ್ಣ, ದಲಿತ ಮುಖಂಡ ಡಿ.ಕೆ.ಕೊಪ್ಪಲುರಾಜಯ್ಯ, ಬಿಇಒ ಆರ್.ಕೃಷ್ಣಪ್ಪ, ಟಿಎಚ್‌ಒ ಡಾ.ಡಿ.ನಟರಾಜು, ಇಸಿಒ ದಾಸಪ್ಪ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net