ಕರೊನಾದಿಂದ ತಡೆಹಿಡಿಯಲಾಗಿದ್ದ ಸಹಕಾರ ಚುನಾವಣೆಗೆ ಅಸ್ತು

vote election
Published on

ಬೆಂಗಳೂರು: ಕರೊನಾ ಕಾರಣದಿಂದಾಗಿ ತಡೆಹಿಡಿಯಲ್ಪಟ್ಟಿದ್ದ ಸಹಕಾರ ಸಂಘಗಳು ಹಾಗೂ ಬ್ಯಾಂಕ್​ಗಳಿಗೆ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಪ್ರಧಾನ ಕಾರ್ಯದಶಿರ್ಗಳು ಸಹಕಾರ ಚುನಾವಣಾ ಆಯೋಗದ ಆಯುಕ್ತರಿಗೆ ಪತ್ರ ಬರೆದು ತಕ್ಷಣ ಸಹಕಾರ ಸಂಗಳು, ಸಹಕಾರ ಬ್ಯಾಂಕ್​ಗಳು ಹಾಗೂ ಸೌಹಾರ್ದ ಸಹಕಾರ ಸಂಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕರೊನಾ ಸೋಂಕು ಹೆಚ್ಚಿದ್ದ ಕಾರಣದಿಂದಾಗಿ ಮಾರ್ಚ್​ ಅಂತ್ಯದ ತನಕ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಚುನಾವಣೆ ನಡೆಸದಂತೆ ಸರ್ಕಾರ ಸೂಚನೆ ನೀಡಿತ್ತು. ಆದರೆ ಕೋವಿಡ್​ ನಿರ್ಬಂಧಗಳಿಗೆ ಇದೀಗ ವಿನಾಯಿತಿ ನೀಡಿರುವುದರಿಂದ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net