

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್‍ಬಿಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುವುದು.
ಆಸಕ್ತರು ಜನವರಿ 08, 2025ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.