

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬೀರ್ಭುಮ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ(ಅ.8) ಸ್ಫೋಟ(Coal Mine Blast) ಸಂಭವಿಸಿದೆ. ಈ ಘಟನೆಯಲ್ಲಿ ಏಳು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್‌ಗೆ (ಜಿಎಂಪಿಎಲ್) ಸೇರಿದ ಗಣಿಯಲ್ಲಿ ಕಲ್ಲಿದ್ದಲು ತೆಗೆಯಲು ಬ್ಲಾಸ್ಟ್ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.
ಸ್ಫೋಟದ ಸದ್ದಿಗೆ ಹಲವು ಕಾರ್ಮಿಕರು ಓಡಿಹೋಗಿದ್ದಾರೆ. ಅಪಘಾತದ ವಿಷಯ ತಿಳಿದ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಗಣಿಯಲ್ಲಿ ಸಿಕ್ಕಿಬಿದ್ದಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಸ್ಫೋಟದಿಂದಾಗಿ ಕಲ್ಲಿದ್ದಲು ಗಣಿ ಬಳಿ ಪಾರ್ಕಿಂಗ್ ವಾಹನಗಳು ಸಹ ನಾಶವಾಗಿವೆ. ಈವರೆಗೆ 3 ಮೃತದೇಹಗಳು ಪತ್ತೆಯಾಗಿದ್ದು, ಪರಿಹಾರ ಕಾರ್ಯಗಳು ನಡೆಯುತ್ತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.