ಬೆಂಗಳೂರು ವಿಮಾನ ನಿಲ್ದಾಣದಲ್ಲಿ 40 ಕೋಟಿ ರೂ. ಮೌಲ್ಯದ ಕೊಕೇನ್ ವಶ; ಒಬ್ಬನ ಬಂಧನ| cocaine-seized

Bengaluru Airport
Published on

cocaine-seized; ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ರೂ.40 ಕೋಟಿ ಮೌಲ್ಯದ 4 ಕೆಜಿಗೂ ಹೆಚ್ಚು ಕೊಕೇನ್ ವಶಪಡಿಸಿಕೊಂಡಿದ್ದು, ಒಬ್ಬ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಆತ ದೋಹಾದಿಂದ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದಾಗಿ ತಿಳಿದು ಬಂದಿದೆ.

(ಏಜೆನ್ಸೀಸ್)

ಪ್ರವಾಸೋದ್ಯಮ ಇಲಾಖೆ ಹಾಗೂ ಯಾವುದೇ ಹೋಂ ಸ್ಟೇ ನಡೆಸುವವರು ಪೊಲೀಸರ‌ ಅನುಮಾತಿ ಪಡೆದಿರಬೇಕು. ಪ್ರತಿನಿತ್ಯ ಬಾಡಿಗೆ ನೀಡುವವರ ಮಾಹಿತಿಯನ್ನು ಪೊಲೀಸರಿಗೆ ತಿಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಜೊತೆಗೆ ಪಾರ್ಟಿಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆದರೆ ಮಾಲೀಕರ ವಿರುದ್ಧ ಕೇಸ್​ ಮಾಡುವುದಾಗಿ ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಎಚ್ಚರಿಕೆ ನೀಡಿದ್ದಾರೆ.

ಪ್ರಯಾಣಿಕನ ಬ್ಯಾಗ್​ ತಪಾಸಣೆ ವೇಳೆ ಎರಡು ಕಾಮಿಕ್ಸ್ ಪುಸ್ತಕ ಪತ್ತೆಯಾಗಿವೆ. ಕಾಮಿಕ್ಸ್ ಪುಸ್ತಕಗಳ ಕವರ್ ಮೇಲೆ ಸೀಲ್ ಮಾಡಿದ ರೀತಿಯಲ್ಲಿದ್ದ 40 ಕೋಟಿ ರೂಪಾಯಿ ಮೌಲ್ಯದ 4 ಕೆಜಿ ಕೊಕೇನ್ ಅನ್ನು ಅಧಿಕಾರಿಗಳು ಕಂಡು ಹಿಡಿದಿದ್ದಾರೆ. ಪ್ರಕರಣ ಸಂಬಂಧ ಡಿಆರ್​ಐ ಅಧಿಕಾರಿಗಳು ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಯಾಣಿಕನನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದು, ಪ್ರಯಾಣಿಕನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net