ಶೈಕ್ಷಣಿಕ ಸೇವೆಗಾಗಿ ಕಾಲೇಜು ಆರಂಭ

arya
ಶಿವಮೊಗ್ಗದ ಆರ್ಯ ಪಿಯು ಕಾಲೇಜಿನಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಚಂದ್ರಪ್ಪ ಗುಂಡಪಲ್ಲಿ ಮಾತನಾಡಿದರು. ಎನ್.ರಮೇಶ್, ಕಣ್ಣನ್, ಬಿ.ಜೆ.ಸುನೀತಾ ದೇವಿ, ಗಣೇಶ್, ರಮೇಶ್ ಇತರರಿದ್ದರು.
Published on

ಶಿವಮೊಗ್ಗ: ಶೈಕ್ಷಣಿಕ ವಲಯದಲ್ಲಿ ಸೇವೆ ಸಲ್ಲಿಸಬೇಕೆಂಬ ಸದುದ್ದೇಶದಿಂದ ಆರ್ಯ ವಿಜ್ಞಾನ ಕಾಲೇಜು ಆರಂಭಿಸಿರುವುದಾಗಿ ಸಂಸ್ಥೆಯ ಅಧ್ಯಕ್ಷ ಎನ್.ರಮೇಶ್ ಹೇಳಿದರು.

ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಶಿಕ್ಷಕ ದಂಪತಿಗಳನ್ನು ಸನ್ಮಾನಿಸಿ ಮಾತನಾಡಿ, ಆರ್ಯ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಕಾಲೇಜು ಉತ್ತಮ ಶೈಕ್ಷಣಿಕ ಸೇವೆ ನೀಡುವುದರಲ್ಲಿ ಅನುಮಾನವಿಲ್ಲ ಎಂದರು.
ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ಮಾತನಾಡಿ, ಶಿಕ್ಷಕರಿಗೆ ಬಹುದೊಡ್ಡ ಜವಾಬ್ದಾರಿ ಇದೆ. ಅದನ್ನು ಅವರು ಸಮರ್ಥವಾಗಿ ನಿರ್ವಹಿಸಬೇಕು. ವಿದ್ಯಾರ್ಥಿಗಳು ಸಹ ಶೈಕ್ಷಣಿಕ ಪ್ರಗತಿಯತ್ತ ಆಸಕ್ತಿ ವಹಿಸಬೇಕು. ಕಷ್ಟಪಟ್ಟು ವ್ಯಾಸಂಗ ಮಾಡಬೇಕೆಂದು ಹೇಳಿದರು.
ವಿವಿಧ ಶಾಲಾ ಕಾಲೇಜುಗಳ ಪ್ರಾಚಾರ್ಯರಾದ ಸುಕೇಶ್, ಅಮರೇಗೌಡ, ದೇವರಾಜ್, ವೆಂಕಟೇಶ್, ಅರುಣ್‌ಕುಮಾರ್, ರಮಾಮಣಿ, ವಾಸುದೇವ್ ಮುಂತಾದವರನ್ನು ಸನ್ಮಾನಿಸಲಾಯಿತು.
ಬಿಇಒ ರಮೇಶ್, ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ಪ್ರಾಚಾರ್ಯೆ ಬಿ.ಜೆ.ಸುನೀತಾ ದೇವಿ, ಆರ್ಯ ಪಿಯು ಕಾಲೇಜಿನ ಉಪನ್ಯಾಸಕರಾದ ಕಣ್ಣನ್, ಶ್ರೀನಿವಾಸ್, ಗಣೇಶ್, ನವೀನ್, ಮಂಜುನಾಥ್, ಮುರಳಿಕೃಷ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net