ಪಾಠ ಮಾಡುವ ವೇಳೆ ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದ ಶಿಕ್ಷಕ ಅರೆಸ್ಟ್​

Pune Lecturer
Published on

ಪುಣೆ: ಪಾಠ ಮಾಡುವ ವೇಳೆ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಕಾಲೇಜು ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಪೊಲೀಸರು ಎಬಿವಿಪಿ ಹಾಗೂ ಆರ್​ಎಸ್​ಎಸ್​ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ಧಾರೆ.

ಸಿಮ್​ಬೈಯೋಸಿಸ್​ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್​ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಶೋಕ್​ ಧೋಲೆ(43) ತರಗಿತಯಲ್ಲಿ ಪಾಠ ಮಾಡುವ ವೇಳೆ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋವನ್ನು ವಿದ್ಯಾರ್ಥಿಯೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡಿದ್ದರು.

ಈ ಸಂಬಂಧ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​(ABVP), ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಸದಸ್ಯರು ಪ್ರತಿಭಟನೆ ನಡೆಸಿ ಡೆಕ್ಕನ್​ ಜಿಮ್ಖಾನಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಿಕ್ಷಕನ ವಿರುದ್ಧ ಭಾರತ ದಂಡ ಸಂಹಿತೆ(IPC Section) 295ರ ಅಡಿಯಲ್ಲಿ ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net