

ನವದೆಹಲಿ: ಕರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳಲ್ಲಿ ಹಾಲಿ ಶೈಕ್ಷಣಿಕ ವರ್ಷದ ಹೊಸ ತರಗತಿಗಳು ಸೆಪ್ಟೆಂಬರ್ನಿಂದ ಪ್ರಾರಂಭವಾಗಲಿವೆ. ಆದರೆ, ಹಾಲಿ ವಿದ್ಯಾರ್ಥಿಗಳ ತರಗತಿಗಳನ್ನು ಆಗಸ್ಟ್ನಲ್ಲೇ ಆರಂಭಿಸುವಂತೆ ವಿಶ್ವವಿದ್ಯಾಲಯಗಳಿಗೆ ಯುಜಿಸಿ (ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ) ಸೂಚಿಸಿದೆ.
ಪರೀಕ್ಷೆಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಆಗಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ಜುಲೈನಲ್ಲಿ ನಡೆಯಲಿದೆ. ಪ್ರಸ್ತುತ , ಹಿಂದಿನ ಸೆಮಿಸ್ಟರ್ನ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಪಿಯುಸಿ ವಿದ್ಯಾರ್ಥಿಗಳಿಗೆ ಶ್ರೇಯಾಂಕ ನೀಡಲಾಗುತ್ತದೆ.
ಎಂಫಿಲ್, ಪಿಎಚ್ಡಿ ವಿದ್ಯಾರ್ಥಿಗಳಿಗೆ 6 ತಿಂಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಮೌಖಿಕ ಪರಿಕ್ಷೆಗಳನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಸಲಾಗುತ್ತದೆ. ವಿಶ್ವವಿದ್ಯಾಲಯಗಳು ವಾರದಲ್ಲಿ 6 ದಿನ ತರಗತಿ ನಡೆಸುವ ಕ್ರಮವನ್ನು ಅನುಸರಿಸಬಹುದು. ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳು, ಸಿಬ್ಬಂದಿಯ ಪ್ರಯಾಣ, ವಸತಿ ಇತಿಹಾಸದ ಬಗ್ಗೆ ಮಾಹಿತಿ ಕಲೆಹಾಕಿರಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.