ಲಾರಿ ಚಕ್ರಕ್ಕೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ಸಾವು

student
Published on

ಗುಂಡ್ಲುಪೇಟೆ: ತಂದೆಯೊಂದಿಗೆ ಬೈಕಿನಲ್ಲಿ ಬರುವಾಗ ಸಂಭವಿಸಿದ ಅಪಘಾತದ ಪರಿಣಾಮವಾಗಿ ವಿದ್ಯಾರ್ಥಿನಿಯೊಬ್ಬಳು ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಪ್ಪಿರುವ ದಾರುಣ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಣ್ಣೇಗಾಲ ಗ್ರಾಮದ ರಾಜು ಎಂಬುವರ ಪುತ್ರಿ ಪ್ರಿಯಾ(19) ಮೃತ ದುರ್ದೈವಿ.

ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎದುರು ಈ ದುರ್ಘಟನೆ ಸಂಭವಿಸಿದೆ. ಮೃತ ಯುವತಿ ಪ್ರಿಯಾ, ಚಾಮರಾಜನಗರ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಎರಡನೇ ವರ್ಷದ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net