

ಪುರಿ; 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಗೆಳೆಯನ ಮುಂದೆಯೇ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಮನಕಲಕುವ ಘಟನೆ ಒಡಿಶಾದ ಪುರಿ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿ ಮತ್ತು ಆಕೆಯ ಗೆಳೆಯ ಶನಿವಾರ ಬಲಿಹರಚಂಡಿ ದೇವಸ್ಥಾನದ ಬಳಿ ಕುಳಿತಿದ್ದಾಗ ಈ ಘಟನೆ ನಡೆದಿದೆ. ಕಿಡಿಗೇಡಿಗಳು ಇವರಿಬ್ಬರ ವಿಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಹೆದರಿದ ಆ ಜೋಡಿಗಳು ಆನ್ಲೈನ್ ಮೂಲಕ 2,500 ರೂ. ಹಾಗೂ 1,000 ರೂ. ಹಣವನ್ನು ಪಾವತಿ ಮಾಡಿದ್ದಾರೆ. ಇಷ್ಟಾದರೂ ಸಹ ಆರೋಪಿಗಳು ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಅವರು ಹಣ ನೀಡಲು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಅವರು ಹಣ ನೀಡಲು ನಿರಾಕರಿಸಿದಾಗ, ಗುಂಪಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದರೆ, ಇನ್ನಬ್ಬರು ಆಕೆಯ ಗೆಳೆಯನ ಮೇಲೆ ಹಲ್ಲೆ ನಡೆಸಿ ಮರಕ್ಕೆ ಕಟ್ಟಿ ಹಾಕಿದ್ದಾಗಿ ತಿಳಿದು ಬಂದಿದೆ. ಆರೋಪಿಗಳು ಮೊದಲು ಆ ವ್ಯಕ್ತಿಗೆ ಥಳಿಸಿ, ನಂತರ ಅವರ ಮುಂದೆಯೇ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಪರಾಧದ ಬಳಿಕ, ದಂಪತಿಯನ್ನು ಹತ್ತಿರದ ಅರಣ್ಯ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ. ಈ ಗುಂಪಿನಿಂದ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
(ಏಜೆನ್ಸೀಸ್)
ಇತ್ತೀಚಿನ ತಿಂಗಳುಗಳಲ್ಲಿ ಒಡಿಶಾದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಬುಧವಾರ ಭುವನೇಶ್ವರದ ಲಾಡ್ಜ್‌ವೊಂದರಲ್ಲಿ ಮಹಿಳೆಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟೆಂಬರ್ 5 ರಂದು, ಗಣೇಶ ಮೂರ್ತಿ ವಿಸರ್ಜನೆಯನ್ನು ವೀಕ್ಷಿಸಲು ತನ್ನ ಸಹೋದರಿಯ ಗ್ರಾಮಕ್ಕೆ ಹೋಗುತ್ತಿದ್ದ 14 ವರ್ಷದ ಬಾಲಕಿಯ ಮೇಲೆ ಕಂಧಮಲ್‌ನಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿತ್ತು. ಕಳೆದ ತಿಂಗಳು, ಮಯೂರ್ಭಂಜ್‌ನಲ್ಲಿ 10 ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಆಕೆಯ ಸಮುದಾಯದ 20 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ್ದ.
ಆಕೆ ಲೈಂಗಿಕ ದೌರ್ಜನ್ಯದ ಆಘಾತದಿಂದ ಹೊರಬಂದ ನಂತರ ಸೋಮವಾರ ಸಂಜೆ ಬಾಲಕಿ ಪ್ರಕರಣ ದಾಖಲಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರೆಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದು. ಬಂಧಿಸುವ ಮೊದಲು ಅವರು ವೀಡಿಯೊಗಳನ್ನು ಅಳಿಸಿದ್ದಾರೆ ಎಂದು ವರದಿಯಾಗಿದೆ.