ಕಾಮೆಡ್​ಕೆ ಯುಜಿಇಟಿ ಕೀ ಉತ್ತರ ಆಗಸ್ಟ್ 23 ರಂದು ಪ್ರಕಟ

Exam
Published on

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (ಕಾಮೆಡ್​ಕೆ) ಯುಜಿಇಟಿಯ ತಾತ್ಕಾಲಿಕ ಕೀ ಉತ್ತರಗಳನ್ನು ಆಗಸ್ಟ್ 23 ರಂದು ವೆಬ್​ಸೈಟ್​​ನಲ್ಲಿ ಬಿಡುಗಡೆ ಮಾಡಲಿದೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು comedk.org ನಿಂದ ಕೀ ಉತ್ತರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆಗಸ್ಟ್ 23 ರಂದು ಕೀ ಉತ್ತರಗಳನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಅದರ ನಂತರ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಫಲಿತಾಂಶವನ್ನು ಸೆಪ್ಟೆಂಬರ್ ನಲ್ಲಿ ಘೋಷಿಸುವ ನಿರೀಕ್ಷೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net