ಸಾಮಾಜಿಕ ಕಾರ್ಯದಿಂದ ನೆಮ್ಮದಿ

klr cmr srinath
ಕೋಲಾರದ ಧರ್ಮರಾಯಸ್ವಾಮಿ ಸಮುದಾಯ ಭವನದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ನಡೆಯಿತು. ಸಿಎಂಆರ್ ಶ್ರೀನಾಥ್, ಕೆ.ಪಿ.ಅರುಣ್, ಪದ್ಮಯ್ಯ ಇದ್ದರು.
Published on

ಕೋಲಾರ:ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂಬುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥೆಯೇ ಸಾಕ್ಷಿ, ಸರ್ಕಾರ ಮಾಡಬೇಕಾಗಿರುವ ಕೆಲಸ ಸಂಸ್ಥೆ ಮಾಡುತ್ತಿದೆ ಎಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಅಭಿಪ್ರಾಯಪಟ್ಟರು.

ನಗರದ ಕಾರಂಜಿಕಟ್ಟೆ ಶ್ರೀ ಧರ್ಮರಾಯಸ್ವಾಮಿ ಸಮುದಾಯ ಭವನದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ಶನಿವಾರ ಹಮ್ಮಿಕೊಂಡಿದ್ದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದರು.
ಧರ್ಮಸ್ಥಳ ಸಂಸ್ಥೆಯಿಂದ ಪ್ರತಿಯೊಬ್ಬರನ್ನು ಆರ್ಥಿಕವಾಗಿ ಬೆಳೆಸುವ ಜತೆಯಲ್ಲಿ ಸಂಬಂಧಗಳ ಪ್ರೀತಿ, ವಿಶ್ವಾಸ ಗಟ್ಟಿಗೊಳಿಸುವ ದಿಸೆಯಲ್ಲಿ ಮುಂದಾಗಿದೆ. ಮಹಿಳೆಯರು ಆರ್ಥಿಕವಾಗಿ ಹಿಂದುಳಿದಿದ್ದು, ಅವರನ್ನು ಸಬಲೆಯಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯಕ್ಕೆ ಮುಂದಾಗಿರುವುದು ನಿಜಕ್ಕು ಶ್ಲಾಘನೀಯ ಎಂದರು.
ರಾಜ್ಯದ್ಯಂತ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಧರ್ಮಸ್ಥಳ ಸಂಸ್ಥೆಯಿಂದ ಸಹಾಯವನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಿ, ಅವರನ್ನು ಸಮಾಜದ ಆಧಾರ ಸ್ತಂಭಗಳಾಗಿ ನಿಲ್ಲುವ ಶ್ರಮ ಪ್ರತಿಯೊಬ್ಬರ ಮೇಲು ಇದೆ ಎಂದರು.
ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಧರ್ಮಸ್ಥಳ ಸಂಸ್ಥೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಶೀನಪ್ಪ, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಪದ್ಮಯ್ಯ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರವೀಣ್ ಪ್ರಭಾಕರ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ನರಸಾಪುರ ಶಾಖೆಯ ಹಿರಿಯ ಪ್ರಬಂಧಕ ಕೆ.ಪಿ.ಅರುಣ್, ತಾಲೂಕು ಯೋಜನಾಽಕಾರಿ ಸಿದ್ದಗಂಗಯ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net