ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿದ ಆಯೋಗ

election
Published on

ಬೆಂಗಳೂರು: ಕರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಅನಿರ್ದಿಷ್ಟ ಅವಧಿಗೆ ಮುಂದೂಡಿದೆ.

ರಾಜ್ಯದ 6025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಗ್ರಾಮ ಪಂಚಾಯಿತಿಗಳ ಅವಧಿ ಇದೇ ಜೂನ್‌ನಿಂದ ಆಗಸ್ಟ್ ಒಳಗೆ ಮುಕ್ತಾಯವಾಗಲಿದೆ. ಕರೊನಾ ನಿಯಮಾವಳಿ ಜಾರಿಯಲ್ಲಿರುವ ಕಾರಣ ಚುನಾವಣಾ ಕಾರ್ಯಕ್ಕೆ ಸಿಬ್ಬಂದಿ ಕೊರತೆ, ಸಾರಿಗೆ ವ್ಯವಸ್ಥೆ ಸಮಸ್ಯೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತೊಂದರೆ ಉಂಟಾಗುವ ಸಾಧ್ಯತೆಗಳು ಕಂಡು ಬಂದ ಕಾರಣ ಚುನಾವಣೆ ಮುಂದೂಡಲಾಗಿದೆ ಎಂದು ಆಯೋಗ ತಿಳಿಸಿದೆ.

ಮತದಾರರ ಪಟ್ಟಿ ತಯಾರಿಕೆ, ಮತದಾನ ಮತ್ತು ಮತಗಳ ಎಣಿಕೆ ದಿನಾಂಕಗಳಂದು ಜನಸಾಮಾನ್ಯರು ಹಾಗೂ ಚುನಾವಣಾ ಕರ್ತವ್ಯನಿರತ ಅಧಿಕಾರಿಗಳು, ಸಿಬ್ಬಂದಿಗಳು, ಪೋಲಿಂಗ್ ಏಜಂಟರು, ರಾಜಕೀಯ ಪಕ್ಷಗಳು, ಸಹಾಯಕ ಸಿಬ್ಬಂದಿಗಳ ಓಡಾಟ ಮತ್ತು ಒಂದು ಕಡೆ ಸೇರಬೇಕಾದ ಸಂದರ್ಭಗಳು ಅನಿವಾರ್ಯವಾಗಿ ಉಂಟಾಗುತ್ತದೆ. ಇದರಿಂದ ವೈರಸ್ ಹರಡುವಿಕೆಗೆ ಅವಕಾಶ ಆಗುತ್ತದೆ ಎಂದು ಆಯೋಗ ಹೇಳಿದೆ. ಬುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರಕ್ಕೆ ಬಂದಿದೆ.

ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಆಯೋಗ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net