

ನವದೆಹಲಿ: ಎರಡು ತಿಂಗಳ ಬಾಡಿಗೆ ಕಟ್ಟಲಾಗದೆ ಮಹಿಳೆ ಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ಬದರ್ಪರದ ಮೊಲರ್ಬಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ವಾಸನೆ ಬರುತ್ತಿದೆ ಎಂಬ ದೂರಿನ ಮೇರೆಗೆ ಪೊಲೀಸರು ಬಂದು ಪರಿಶೀಲಿಸಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪೂಜಾ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಜತೆಗೆ 8 ಹಾಗೂ 18 ವರ್ಷದ ಇಬ್ಬರು ಹೆಣ್ಣುಮಕ್ಕಳೂ ಸಾವಿಗೀಡಾಗಿದ್ದಾರೆ.