ಗಣಿ ಅಕ್ರಮಕ್ಕೆ ತಾರ್ಕಿಕ ಅಂತ್ಯಕ್ಕಾಗಿ ಸಮಿತಿ ರಚನೆ

Parameswar Crime11
Published on

ಬೆಂಗಳೂರು: ಗಣಿಗಾರಿಕೆಯಲ್ಲಿ ಅಕ್ರಮ ನಡೆದಿರುವುದಕ್ಕೆ ತಾರ್ಕಿಕ ಅಂತ್ಯವಾಡಲು ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಸರ್ಕಾರ ಸಚಿವ ಸಂಪುಟದ ಉಪ ಸಮಿತಿಯನ್ನು ರಚನೆ ಮಾಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಗಣಿಗಾರಿಕೆಯಲ್ಲಿ ಅಕ್ರಮ ನಡೆದು ಸಾವಿರಾರು ಕೋಟಿ ನಷ್ಟ ಆಗಿರುವ ಬಗ್ಗೆ ಗಣಿ ಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗೆ ಪತ್ರ ಬರೆದು ಗಮನಕ್ಕೆ ತಂದಿದ್ದರು. ಈ ಬಗ್ಗೆ ಚರ್ಚೆ ನಡೆದಾಗ ಎಚ್.ಕೆ. ಪಾಟೀಲ್ ಅವರಿಗೆ ಈ ಬಗ್ಗೆ ವರದಿ ನೀಡುವಂತೆ ಸೂಚಿಸಲಾಯಿತು. ಆದರಿಂದ ಗಣಿ ಅಕ್ರಮಕ್ಕೆ ತಾರ್ಕಿಕ ಅಂತ್ಯವಾಡಲು ಸಬ್ ಕಮಿಟಿ ರಚನೆ ಮಾಡಲಾಗಿದೆ ಎಂದರು.

ಪ್ರಮುಖವಾಗಿ ಪ್ರಕರಣದಲ್ಲಿ ವಸೂಲಾತಿ ಆಯುಕ್ತರ ನೇಮಕ ಮತ್ತು ಇತ್ಯರ್ಥಕ್ಕಾಗಿ ತ್ವರಿತಗತಿ ಕೋರ್ಟ್ ಸ್ಥಾಪಿಸಲು ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ನಾನು ಸೇರಿ ಆರು ಸಚಿವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಅಧ್ಯಕ್ಷರಾದ ಎಚ್.ಕೆ. ಪಾಟೀಲ್ ಯಾವಾಗ ಸಭೆ ಕರೆದಾಗ ಹೋಗುವುದಾಗಿ ಪರಮೇಶ್ವರ್ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net