ಸಂಘಟನೆಯಿಂದ ಸಮುದಾಯ ಸದೃಢ

kuruba samaja
ಚಿಕ್ಕಮಗಳೂರಲ್ಲಿ ಜಿಲ್ಲಾ ಕನಕ ನೌಕರರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು. ರೇಖಾ ಹುಲಿಯಪ್ಪಗೌಡ, ಎ.ಎನ್.ಮಹೇಶ್, ಜೆ.ಎಚ್.ಪ್ರಹ್ಲಾದ, ಕೆ.ಎಂ.ಮಂಜುನಾಥ್ ಇತರರಿದ್ದರು.
Published on

ಚಿಕ್ಕಮಗಳೂರು: ರಾಜಕೀಯ, ಆರ್ಥಿಕ, ಸಾಮಾಜಿಕವಾಗಿ ಸದೃಢರಾಗಬೇಕಾದರೆ ಸಮುದಾಯ ಸಂಘಟನೆಯಾಗಬೇಕು ಎಂದು ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ ತಿಳಿಸಿದರು.

ನಗರದ ಜಿಲ್ಲಾ ಕನಕ ನೌಕರರ ಸಂಘದಿಂದ ವಿದ್ಯಾಭವನದಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜನಪ್ರತಿನಿಧಿಗಳು ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಆ ಸಮಾಜದ ಮಕ್ಕಳು ವಿದ್ಯಾವಂತರಾಗಬೇಕು. ಈ ನಿಟ್ಟಿನಲ್ಲಿ ಕುರುಬ ಸಮಾಜ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಸಬೇಕು ಎಂದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.
ಜಿಪಂ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಕನಕ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಎಚ್.ಪ್ರಹ್ಲಾದ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಎಂ.ಮಂಜುನಾಥ್, ಡಿಡಿಪಿಐ ಜಿ.ರಂಗನಾಥ ಸ್ವಾಮಿ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎ.ಗೋಪಾಲಕೃಷ್ಣ, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ವೈ.ಸೋಮಶೇಖರ್, ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ್, ಕೃಷಿ ಇಲಾಖೆ ಉಪನಿರ್ದೇಶಕ ಲೋಕೇಶ್, ನಗರಸಭಾ ಸದಸ್ಯೆ ಸುಜಾತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net