

ನವದೆಹಲಿ: ಈ ವರ್ಷದ ಜಿಎಸ್ಟಿ ಪರಿಹಾರ ಸೆಸ್ ಬಾಬ್ತು ಸಂಗ್ರಹವಾಗಿರುವ 20 ಸಾವಿರ ಕೋಟಿ ರೂ. ಮೊತ್ತವನ್ನು ಇವತ್ತು ರಾತ್ರಿಯೊಳಗೆ ಎಲ್ಲ ರಾಜ್ಯಗಳಿಗೆ ಹಂಚಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
ಇಂದು ನವದೆಹಲಿಯಲ್ಲಿ ನಡೆದ 42ನೇ ಜಿಎಸ್ಟಿ ಮಂಡಳಿ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಈ ವಿಷಯ ತಿಳಿಸಿದರು. ಇದಕ್ಕಾಗಿ ಬಿಹಾರ ಡಿಸಿಎಂ ಸುಶೀಲ್ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ ಎಂದೂ ಅವರು ತಿಳಿಸಿದರು. (ಏಜೆನ್ಸೀಸ್)