ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ: ಮಾಜಿ‌ ಸಿಎಂ ಒತ್ತಾಯಕ್ಕೆ ಸಿಎಂ ಸ್ಪಂದನೆ

Basavaraja Bommai
Published on

ಬೆಂಗಳೂರು:  ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ಇಂದು ಬೆಳಗ್ಗೆ   ಸಂಭವಿಸಿದ ಅಪಘಾತದಲ್ಲಿ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ  ಸಂಸದ ಬಸವರಾಜ ಬೊಮ್ಮಾಯಿ ದಿಗ್ಭ್ರಾಂತಿ ವ್ಯಕ್ತಪಡಿಸಿ, ಪರಿಹಾರಕ್ಕೆ ಒತ್ತಾಯಿಸಿದರೆ ಸಿಎಂ ಸಿದ್ದರಾಮಯ್ಯ ತಕ್ಷಣ ಸ್ಪಂದಿಸಿ ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದ ತಮ್ಮ ಖಾತೆಗಳಲ್ಲಿ ಸಿಎಂ, ಮಾಜಿ ಸಿಎಂ ಪ್ರತ್ಯೇಕವಾಗಿ ಸಂದೇಶ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪತಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌.

ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಂದಿಸಿ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ಪರಿಹಾರ ಪ್ರಕಟಿಸಿದ್ದಾರೆ. ಮಡಿದವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಸಿದ್ದರಾಮಯ್ಯ ಹಾಗೂ ಬಸವರಾಜ ಬೊಮ್ಮಾಯಿ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net