ವಂಚನೆ ಆರೋಪ, ಡ್ರೋನ್ ಪ್ರತಾಪ್ ವಿರುದ್ಧ ದೂರು

drone Prathap
Published on

ಬೆಂಗಳೂರು : ಬಿಗ್‌ಬಾಸ್ ಕನ್ನಡ ಸೀಸನ್ ೧೦ರ ರನ್ನರ್‌ಅಪ್ ಡ್ರೋನ್ ಪ್ರತಾಪ್ ವಿರುದ್ಧ ರೈತರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.
ಡ್ರೋನ್ ಪ್ರತಾಪ್, ಸಿರಣ್ ಮಾಧವ್, ಸಾರಂಗ ಶ್ರೀಮಂತ್ ಮಾನೆ ಮತ್ತು ಸಾಗರ್ ಗರ್ಗ್ ಎಂಬುವವರು ಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಕ್ಯಾಸ್ಟರ್ ಡ್ರೋನಾಟಿಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳನ್ನು ತೆರೆದು ಸುಳ್ಳು ಮಾಹಿತಿ ನೀಡಿ ರೈತರಿಂದ ಹಣ ಪಡೆದು ವಂಚಿಸುತ್ತಿದ್ದಾರೆ ಎಂದು ಡಾ.ಪ್ರಯಾಗ್ ಎಂಬುವವರು ಆರೋಪಿಸಿದ್ದು ಸೂಕ್ತ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎನ್‌ಸಿಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net