

ಮಂಡ್ಯ: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆಕೆಯ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದು, ದರ್ಶನ್ರನ್ನು ಎರಡು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಲಾಗಿದೆ. ಒಂದೆಡೆ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ನಟನ ಮಹಿಳಾ ಅಭಿಮಾನಿಯೊಬ್ಬರು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಎಸಗಿದ್ದಾರೆ.
ಇದನ್ನೂ ಓದಿ: ಕಟಕೋಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ
"ದರ್ಶನ್ರನ್ನು ಪೊಲೀಸರು ಬಂಧಿಸಲು ಎಚ್.ಡಿ. ಕುಮಾರಸ್ವಾಮಿ ಕಾರಣ. ಅವರ ಮೇಲೆ ಕೊಲೆ ಆರೋಪ ಬರುವಂತೆ ಎಚ್ಡಿಕೆ ಮಾಡಿದ್ದಾನೆ. ಹಣ ಕೊಟ್ಟು ದರ್ಶನ್ ವಿರುದ್ದ ಧಿಕ್ಕಾರದ ಕೂಗು ಹಾಕಿಸುತ್ತೀಯಾ? ಸುಮಲತಾ ಅಂಬರೀಶ್ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಚಾನ್ಸ್ ಕೊಟ್ಟಿದ್ದಕ್ಕೆ ಬಾಸ್ ವಿರುದ್ಧ ಸ್ಕೆಚ್ ಹಾಕುತ್ತೀಯಾ? ಸುಮಲತಾ ಅವರಿಂದ ಭಿಕ್ಷೆ ಪಡೆದುಕೊಂಡಿರುವ ಮಗ ನೀನು” ಎಂದು ಏಕವಚನದಲ್ಲಿ ದಾಳಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸಚಿವರನ್ನು ಏಕವಚನದಲ್ಲಿ ನಿಂದಿಸಿದ ದರ್ಶನ್ ಅಭಿಮಾನಿ ಮಂಗಳಾ ಅವರು ವಿರುದ್ಧ ಇದೀಗ ಮಂಡ್ಯದ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ದೂರು ಕೊಟ್ಟಿದ್ದಾರೆ ಎಂದು ವರದಿಯಾಗಿದೆ.