ಪ್ರಧಾನಿ ಮೋದಿ, ಜೆ.ಪಿ.ನಡ್ಡಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Modi Nadda
Published on

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಕೈಗೊಂಡಿದ್ದ ಪ್ರಚಾರದಲ್ಲಿನ ಹೇಳಿಕೆಗಳೇ ಈಗ ಕೆಲವೊಂದು ಮುಳುವಾಗಿ ಪರಿಣಮಿಸಿವೆ. ಮಾತ್ರವಲ್ಲ, ಇದೇ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದೂರು ನೀಡಲಾಗಿದೆ.

ಪ್ರಧಾನಿ ಮೋದಿ ಹಾಗೂ ಜೆ.ಪಿ.ನಡ್ಡಾ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮೋದಿ ಹಾಗೂ ನಡ್ಡಾ ನೀಡಿದ್ದ ಹೇಳಿಕೆಗಳನ್ನು ಉಲ್ಲೇಖಿಸಿ ಅವರ ವಿರುದ್ಧ ಕಾನೂನುಕ್ರಮ ಜರುಗಿಸಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿ ಮನವಿ ಮಾಡಿಕೊಳ್ಳಲಾಗಿದೆ.

ಬಿಜೆಪಿ ಸೋತರೆ ಕೇಂದ್ರ ಸರ್ಕಾರದ ಯೋಜನೆಗಳನ್ನು ರದ್ದು ಮಾಡುವುದಾಗಿ ಜೆ.ಪಿ.ನಡ್ಡಾ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತದಿಂದ ಕರ್ನಾಟಕ ಬೇರ್ಪಡಿಸುವ ಸಂಚು ನಡೆದಿದೆ ಎಂದು ಮೋದಿ ಹೇಳಿದ್ದಾರೆ. ಹೀಗಾಗಿ ಅವರಿಬ್ಬರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net