

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆ, ಮರಗಳವು, ಅರಣ್ಯ ಒತ್ತುವರಿ ನಿರಂತರವಾಗಿದೆ ಎಂಬ ಮಾಧ್ಯಮಗಳ ವರದಿಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.
ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯೂ ಆದ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಟಿಪ್ಪಣಿಯೊಂದನ್ನು ಕಳುಹಿಸಿದ್ದಾರೆ. ಕಳ್ಳಬೇಟೆ, ಮರಗಳವು, ಅರಣ್ಯ ಒತ್ತುವರಿ ಕುರಿತು ವರದಿ ಜತೆಗೆ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಕಚೇರಿಗೆ ಮಾಹಿತಿ ಬಂದಿದೆ.
ಕಳ್ಳಬೇಟೆ, ಮರಗಳವು, ಒತ್ತುವರಿ ಜತೆಗೆ ಅರಣ್ಯ ಭೂಮಿ ಅಕ್ರಮವಾಗಿ ಮಂಜೂರಾಗಿದ್ದರೆ ಎಷ್ಟು ಪ್ರಮಾಣದಲ್ಲಾಗಿದೆ ಎಂಬ ಬಗ್ಗೆ ಸಿಸಿಎ್ ದರ್ಜೆ ಅಧಿಕಾರಿ ಖುದ್ದಾಗಿ ಪರಿಶೀಲಿಸಬೇಕು. ಸಮಗ್ರ ತನಿಖೆ ನಡೆಸಿ ಮೂರು ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದು ಈಶ್ವರ ಖಂಡ್ರೆ ಸೂಚಿಸಿದ್ದಾರೆ.