ಪಠ್ಯದ ಸಮಗ್ರ ಅಧ್ಯಯನದಿಂದ ಹೆಚ್ಚು ಅಂಕ ಗಳಿಕೆ ಸಾಧ್ಯ

13 Dwd 6
Published on

ಧಾರವಾಡ: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ತಾಯಿ ಇದ್ದಂತೆ. ಪಠ್ಯದ ಸಮಗ್ರ ಅಧ್ಯಯನದಿಂದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸಾಧ್ಯ ಎಂದು ಡಿಮ್ಹಾನ್ಸ್ ಮನೋವೈದ್ಯಕೀಯ ಸಮಾಜ ಕಾರ್ಯಕರ್ತ ಪ್ರಶಾಂತ ಪಾಟೀಲ ಹೇಳಿದರು.
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ತಾಲೂಕಿನ ಕೋಟೂರ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವಸಿದ್ಧತೆ ಹೇಗೆ? ವಿಷಯ ಕುರಿತು ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಓದಿನ ಬಗ್ಗೆ ಹಸಿವು ಇರಬೇಕು. ಬೇಸರ ಹಾಗೂ ಜಡತ್ವದಿಂದ ಏಕಾಗ್ರತೆ ಕುದುರುವುದಿಲ್ಲ. ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಪಡದೆ ಆತ್ಮವಿಶ್ವಾಸದಿಂದ ಓದಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಕಟ್ಟಿಮನಿ ಮಾತನಾಡಿ, ದೇಶದ ಉಜ್ವಲ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ನೀವು ಮಾಡುವ ಸಾಧನೆ ಸಮಾಜ ಹಾಗೂ ನಿಮ್ಮ ತಂದೆ- ತಾಯಿ, ಗುರುಗಳಿಗೆ ಗೌರವ ತರುವಂತಿರಬೇಕು ಎಂದರು.
ಮುಖ್ಯಾಧ್ಯಾಪಕಿ ವಿಜಯಲಕ್ಷಿ÷್ಮÃ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಎಸ್.ವೈ. ಕಾಟಕರ ಸ್ವಾಗತಿಸಿದರು. ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಸ್. ಗೌಡರ ನಿರೂಪಿಸಿದರು. ಎಚ್.ಐ. ಮುಲ್ಲಾನವರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net