ಎಸ್‌ಟಿ ಪಂಗಡದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ

Published on

ತಿ.ನರಸೀಪುರ: ಪಟ್ಟಣದ ತಾಲೂಕು ಕಚೇರಿ ರಸ್ತೆಯಲ್ಲಿರುವ ಕಿಯೋನಿಕ್ಸ್ ಯುವ ಡಾಟ್ ಕಾಂ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಯ ಅಡಿಯಲ್ಲಿ ಪರಿಶಿಷ್ಟ ಪಂಗಡ(ಎಸ್ಟಿ)ದ 18ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ.

ಈ ಸಮುದಾಯದ ಅಭ್ಯರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಸೇರಿದಂತೆ ಟ್ಯಾಲಿ, ವೆಬ್ ಡೆವಲಪರ್, ಮಲ್ಟಿಮೀಡಿಯಾ ಮತ್ತು ಕಮ್ಯುನಿಕೇಷನ್ ಇಂಗ್ಲಿಷ್ ಕೋರ್ಸ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಲು ಮೇ 5 ಕೊನೇ ದಿನ. ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ತರಬೇತಿ ಸೇರ ಬಯಸುವ ಅಭ್ಯರ್ಥಿಗಳು ಅವರ ಭಾವಚಿಟ್ರದೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ಎಸ್‌ಎಸ್‌ಎಲ್‌ಸಿ/ಪಿಯುಸಿ ಮಾರ್ಕ್ಸ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9686407359 ಅಥವಾ 9880272950 ಕರೆ ಮಾಡಬಹುದು. ಇಲ್ಲವೇ ತಾಲೂಕು ಕಚೇರಿ ರಸ್ತೆ ಎದುರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿ ಮೇಲಿರುವ ಕಿಯೋನಿಕ್ಸ್ ಯುವ ಡಾಟ್ ಕಾಂ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡುವಂತೆ ಪ್ರಕಟಣೆ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net