ಲಲಿತಕಲಾ ಅಕಾಡೆಮಿಯಿಂದ ಗ್ರಾಫಿಕ್ ತರಬೇತಿ ಕಾರ್ಯಾಗಾರದ ಸಮಾರೋಪ

Published on



ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಸೆಪ್ಟೆಂಬರ್ 05 ರಂದು ಸಂಜೆ 5.00 ಗಂಟೆಗೆ ಬೆಂಗಳೂರು ವಿಶ್ವವಿದ್ಯಾಲಯ, ದೃಶ್ಯಕಲಾ ವಿಭಾಗ, ಬೆಂಗಳೂರು ಇಲ್ಲಿ ಗ್ರಾಫಿಕ್ ತರಬೇತಿ ಕಾರ್ಯಾಗಾರದ  ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.

ಕಾರ್ಯಾಗಾರದ ಸಮಾರೋಪ ನುಡಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ  ಡಾ. ಧರಣಿದೇವಿ ಮಾಲಗತ್ತಿ ಭಾ.ಪೊ.ಸೇ. ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ. ಸಿ ಚಂದ್ರಶೇಖರ್ ಹಾಗೂ, ನಿವೃತ್ತ ಪ್ರಾಧ್ಯಾಪಕರಾದ ಡಾ. ಶ್ರೀಧರ್ ಮೂರ್ತಿ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಪ.ಸ.ಕುಮಾರ್, ಬೆಂಗಳೂರು ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net