ಪರ್ಯಾಯ ಅಭ್ಯರ್ಥಿ ಹುಡುಕಿ ಆಗಿದೆ: ಪಕ್ಷ ಬಿಡುವವರನ್ನು ತಡೆಯಲು ಆಗಲ್ಲ ಎಂದ ಜೆಡಿಎಸ್ ನಾಯಕ ಎಚ್‌ಡಿಕೆ

3 bidadi photo 3 jpg
Published on

ಬಿಡದಿ: ಪಕ್ಷ ಬಿಟ್ಟು ಹೋಗುವವರು ಲುವಾಗಿ ವಾತನಾಡೋದು ಬೇಡ, ಶಾಸಕರ ಸಮಸ್ಯೆ ಕೇಳಲು ನನ್ನ ಮನೆ ಬಾಗಿಲು ಸದಾ ತೆರೆದಿದೆ ಎಂದು ವಾಜಿ ಸಿಎಂ ಎಚ್.ಡಿ.ಕುವಾರಸ್ವಾಮಿ ಹೇಳಿದರು.

ಬಿಡದಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ಭಾನುವಾರ ಆರಂಭವಾದ ಎರಡನೇ ಹಂತದ ಅಲ್ಪಸಂಖ್ಯಾತ ಟಕದ ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ವಾತನಾಡಿದ ಅವರು, ಕೆಲ ಶಾಸಕರು ಬಹಿರಂಗವಾಗಿ ಪಕ್ಷ ತೊರೆಯುವ ಬಗ್ಗೆ ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಸ್ವತಃ ಗೊಂದಲ ಸೃಷ್ಟಿಸಿಕೊಂಡು ಬಹಿರಂಗ ಹೇಳಿಕೆ ಕೊಡುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬರಲಿ ಚರ್ಚೆ ವಾಡಲು ಸಿದ್ಧನಿದ್ದೇನೆ. ಯಾರೂ ಪಕ್ಷದ ಸಂಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು ಎಂದು ಹೇಳಿದರು.

ಮೂರ್ನಾಲ್ಕು ಜನ ಪಕ್ಷ ತೊರೆಯುವ ವಾತನ್ನಾಡಿದ್ದಾರೆ. ಅವರ ಕ್ಷೇತ್ರಗಳಲ್ಲಿ ಈಗಾಗಲೇ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಅಲ್ಲದೆ ಪಕ್ಷದಲ್ಲಿ ಎಲ್ಲ ಸಮುದಾಯಗಳಿಗೂ ಅವಕಾಶ ಕಲ್ಪಿಸಲು ವಿಜಯದಶಮಿ ನಂತರ ಜೆ.ಪಿ.ಭವನದಲ್ಲಿ ಜಿಲ್ಲಾವಾರು ಸಭೆ ನಡೆಸಿ ಚರ್ಚೆ ನಡೆಸಲಾಗುತ್ತದೆ. ಇಂದಿನ ಕಾರ್ಯಾಗಾರದಲ್ಲಿ ಅಲ್ಪಸಂಖ್ಯಾತರು ಯಾವ ರೀತಿ ಕೆಲಸ ವಾಡಿ ಪಕ್ಷ ಸಂಟಿಸಬೇಕು ಎಂಬುದನ್ನು ತಿಳಿಸಲಾಗುತ್ತದೆ ಎಂದರು.

ಪಕ್ಷ ಬಿಟ್ಟು ಹೋಗಿ ಅಂತ ಯಾರಿಗೂ ಹೇಳಿಲ್ಲ. ಆದರೆ, ಪಕ್ಷ ತ್ಯಜಿಸಿ ಹೋದ ಮೇಲೆ ನಾನೇನು ವಾಡಲು ಆಗುವುದಿಲ್ಲ. ಈ ಹಿಂದೆ ಕೆಲವರು ಪಕ್ಷದ ಶಕ್ತಿ ಬಳಸಿಕೊಂಡು ಕಾರ್ಯಕರ್ತರನ್ನು ನಡುನೀರಿನಲ್ಲಿ ಬಿಟ್ಟು ಹೋದರು. ಇವರಿಂದಲೇ ಪಕ್ಷದ ಸಂಟನೆ ಹಿಂದೆ ಉಳಿಯಿತು ಎಂದು ಎಚ್.ಡಿ.ಕುಮಾರಸ್ವಾಮಿ ಬೇಸರಗೊಂಡರು.

ನಿನ್ನೆಯೂ ಒಬ್ಬ ಶಾಸಕರು ಹೇಳಿಕೆ ನೀಡಿದ್ದು, ನಾನಾಗಿಯೇ ಪಕ್ಷ ಬಿಟ್ಟು ಹೋಗಲ್ಲ, ನಾಯಕರೇ ಗೊಂದಲ ಸೃಷ್ಟಿ ವಾಡ್ತಿರೋದು ಅಂದಿದ್ದಾರೆ. ನಾವ್ಯಾಕೆ ಗೊಂದಲ ಸೃಷ್ಟಿ ವಾಡೋಣ. ಅಧಿಕಾರದ ರುಚಿ ಕಂಡು ನಡು ನೀರಲ್ಲಿ ಕಾರ್ಯಕರ್ತರನ್ನು ಬಿಟ್ಟು ಹೋಗ್ತಾರೆ. ನಾಯಕರಿಂದ ಪಕ್ಷ ಅಲ್ಲ, ಕಾರ್ಯಕರ್ತರಿಂದ ಪಕ್ಷ. ಕೆಲವರು ಪಕ್ಷಕ್ಕೆ ಕುತ್ತಿಗೆ ಕುಯ್ದು ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಕುಮಾರಸ್ವಾಮಿ ಅಸವಾಧಾನ ವ್ಯಕ್ತಪಡಿಸಿದರು.

ವಾಜಿ ಸಚಿವ ನಬಿ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಮುಖಂಡರಾದ ಜ್ರ್ರುಲ್ಲಾಖಾನ್, ಸೈಯದ್ ಮಹಮದ್ ಅಲ್ತ್ಾ, ನಾಸಿರ್ ಹುಸೇನ್ ಉಸ್ತಾದ್ ಮತ್ತಿತರರಿದ್ದರು.

ಜೆಡಿಎಸ್ ಪುಟಿದೇಳುತ್ತಿದೆ :  ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಆಗುವುದೂ ಇಲ್ಲ. ಪಕ್ಷ ತಳಮಟ್ಟದಿಂದ ಪುಟಿದೇಳುತ್ತಿದೆ. ಕಾಂಗ್ರೆಸ್‌ನಿಂದಲೂ ಸಣ್ಣಪುಟ್ಟ ಜಾತಿಗಳ ಕಾರ್ಯಾಗಾರ ಆಯೋಜನೆ ನಡೆದಿದೆ. ನಮ್ಮ ಪಕ್ಷ ನಿಷ್ಕ್ರಿಯ ಆಗಿಬಿಟ್ಟಿದೆ ಅಂದುಕೊಂಡಿದ್ದರು. ಈಗ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿರುವಂತಿದೆ. ಅದೇ ಕಾರಣಕ್ಕೆ ನಮ್ಮಂತೆಯೇ ಕಾರ್ಯಾಗಾರ ಆಯೋಜಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ಗೆ ಎಚ್‌ಡಿಕೆ ತಿರುಗೇಟು ಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net