ಮತ್ತೊಮ್ಮೆ ಪಾರದರ್ಶಕವಾಗಿ ನೀಟ್-ಯುಜಿ ಪರೀಕ್ಷೆ ನಡೆಸಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ

Mallikarjun Kharge
Published on

ನವದೆಹಲಿ: ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕೆ ಇರುವ ನೀಟ್-ಯುಜಿ ಪರೀಕ್ಷೆಯನ್ನು ಮತ್ತೊಮ್ಮೆ ಪರಾದರ್ಶಕವಾಗಿ ನಡೆಸಬೇಕು ಮತ್ತು ಎಲ್ಲಾ "ಪೇಪರ್ ಸೋರಿಕೆ ಹಗರಣಗಳನ್ನು" ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಕೂಲಂಕುಷವಾಗಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಒತ್ತಾಯಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿ ಸರ್ಕಾರ ತನ್ನ ದುಷ್ಕೃತಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್​ ಮೇಲ್ವಿಚಾರಣೆಯಲ್ಲಿ ಕೂಲಂಕುಷವಾಗಿ ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೆಲವು ಸ್ಥಳಗಳಲ್ಲಿ ಮಾತ್ರ ಅಕ್ರಮಗಳು ಅಥವಾ ವಂಚನೆಗಳು ನಡೆದಿವೆ" ಎಂದು ಶಿಕ್ಷಣ ಸಚಿವಾಲಯ ಹೇಳಿದೆ. ಆದರೆ ಇದು ದಾರಿ "ತಪ್ಪಿಸುವ" ಕೆಲಸ. ಬಿಜೆಪಿ-ಆರ್‌ಎಸ್‌ಎಸ್ ಇಡೀ ಶಿಕ್ಷಣ ವ್ಯವಸ್ಥೆಯ ಮೇಲೆ ಹಿಡಿತ ಸಾಧಿಸುವ ಮೂಲಕ ಶಿಕ್ಷಣ ಮಾಫಿಯಾವನ್ನು ಉತ್ತೇಜಿಸುತ್ತಿದೆ ಎಂದು ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.

ಬಿಜೆಪಿ, ಆರ್​ಎಸ್​ಎಸ್ ಶಿಕ್ಷಣ ಮಾಫಿಯಾಕ್ಕೆ ಉತ್ತೇಜನ ನೀಡಿ ಇಡೀ ಶಿಕ್ಷಣ ವ್ಯವಸ್ಥೆಯನ್ನು ಕೈವಶ ಮಾಡಿಕೊಂಡಿದೆ. ಎನ್‌ಸಿಇಆರ್‌ಟಿ ಪುಸ್ತಕ ಅಥವಾ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಒಟ್ಟಾರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಲು ಮೋದಿ ಸರ್ಕಾರ ಮುಂದಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net