ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತಂಡಕ್ಕೆ ಅಭಿನಂದನೆ

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತಂಡಕ್ಕೆ ಅಭಿನಂದನೆ
Published on

ಕೆ.ಆರ್.ನಗರ: ಮಕ್ಕಳಿಗೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡಾ ಚಟುವಟಿಕೆಗೆ ಮಹತ್ವ ನೀಡಿದ್ದರಿಂದ ಶಾಲೆಯ ಬಾಲಕಿಯರ ವಿಭಾಗದ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಕೆಸ್ತೂರು ಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಗೋವಿಂದ್ ತಿಳಿಸಿದರು.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕೆಸ್ತೂರು ಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಂಡವನ್ನು ಅಭಿನಂದಿಸಿ ಮಾತನಾಡಿದರು.
ಗ್ರಾಮದವರೇ ಆದ ಶಾಸಕ ಡಿ.ರವಿಶಂಕರ್ ಹಾಗೂ ಅವರ ತಂದೆ ಕೆಪಿಸಿಸಿ ಸದಸ್ಯ ದೊಡ್ಡಸ್ವಾಮೇಗೌಡ ಅವರ ಸಹಕಾರದಿಂದ ಶಾಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಕ್ರೀಡೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಶಾಲೆಯ ಮಕ್ಕಳು ವಿವಿಧ ವಿಭಾಗದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಾಧನೆ ತೋರಿದ್ದಾರೆ ಎಂದರು.

ಸಹ ಶಿಕ್ಷಕ ಎಲ್.ಆರ್.ಮಹೇಶ್, ರಾಜೇಗೌಡ. ಎಸ್.ಕೆ.ರೇಖಾ, ಸಿ.ಪಿ.ಚೈತ್ರಾ, ಎಂ.ಮಹದೇವ್, ರಕ್ಷಿತ್, ಹರ್ಷಿತಾ, ಕೆ.ಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net