ಹರಿಯಾಣದಲ್ಲಿ ಕಾಂಗ್ರೆಸ್​-ಎಎಪಿ ಸೀಟು ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಕಗ್ಗಂಟು

aap
Published on

ನವದೆಹಲಿ:  ಒಂದು ವೇಳೆ ಕಾಂಗ್ರೆಸ್​ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದಿದ್ದರೆ ಇಂದು ಸಂಜೆ ಎಲ್ಲಾ 90 ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಹರಿಯಾಣ ಎಎಪಿ ಘಟಕದ ಮುಖ್ಯಸ್ಥ ಸುಶೀಲ್ ಗುಪ್ತಾ ಸೋಮವಾರ ಹೇಳಿದ್ದಾರೆ.

ವಿಧಾನಭೆ ಚುನಾವಣೆಯಲ್ಲಿ ಕಾಂಗ್ರೆಸ್​ - ಎಎಪಿ ಮೈತ್ರಿ ಕುರಿತು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಗುಪ್ತಾ, ಆಮ್ ಆದ್ಮಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. "ನಾವು ಸಂಜೆಯೊಳಗೆ 90 ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಉಭಯ ಪಕ್ಷಗಳ ನಡುವಿನ ಮಾತಕತೆ ಸ್ಥಗಿತಗೊಂಡಿದ್ದು, ಎಎಪಿ 10 ಕ್ಷೇತ್ರಗಳಿಗೆ ಬೇಡಿಕೆ ಇಟ್ಟರೆ, ಕಾಂಗ್ರೆಸ್ 5 ಸ್ಥಾನಗಳನ್ನು ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಹೇಳಿದೆ. ಈ ಕುರಿತು ಕಾಂಗ್ರೆಸ್​ ಪ್ರತಿಕ್ರಿಯೆಗಾಗಿ ಎಎಪಿ ಕಾಯುತ್ತಿದೆ. ಆದರೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಹೇಳಿದರು.

ಹರಿಯಾಣ ವಿಧಾನಸಭೆಯ90 ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಸೆ.12 ಕೊನೆಯ ದಿನ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net