ಕ್ಯಾತನಹಳ್ಳಿ ಪ್ಯಾಕ್ಸ್‌ನಲ್ಲಿ ಕಾಂಗ್ರೆಸ್ ಮೈತ್ರಿಕೂಟ ಮೇಲುಗೈ

Published on

ಪಾಂಡವಪುರ : ತಾಲೂಕಿನ ಕ್ಯಾತನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ರೈತಸಂಘ, ಕಾಂಗ್ರೆಸ್ ಮೈತ್ರಿಕೂಟ ಅಭ್ಯರ್ಥಿಗಳು 10 ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದು, 2 ಸ್ಥಾನ ಪಡೆಯುವ ಮೂಲಕ ಜೆಡಿಎಸ್ ಬೆಂಬಲಿತರು ಹಿನ್ನಡೆ ಅನುಭವಿಸಿದ್ದಾರೆ.

ಸಂಘದ ಈ ಹಿಂದಿನ ಆಡಳಿತ ಮಂಡಳಿಯ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 4 ರಂದು ನೂತನ ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಿಗದಿಯಾಗಿತ್ತು. ಒಟ್ಟು 12 ಸದಸ್ಯ ಬಲದ ಸಂಘದ ಆಡಳಿತ ಮಂಡಳಿಗೆ ಕಾಂಗ್ರೆಸ್, ರೈತಸಂಘ ಮೈತ್ರಿಕೂಟ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದರು.

ಚುನಾಯಿತ ಅಭ್ಯರ್ಥಿಗಳು: ಸಾಲಗಾರರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿ.ಎಸ್.ದರ್ಶನ್ ಚಲುವರಸನಕೊಪ್ಪಲು, ಕೆ.ಎಂ.ಕೇಶವ, ಎ.ಗಂಗಾಧರ, ಜಿ.ಪಿ.ಅಭಿಷೇಕ್, ಚಂದ್ರಶೇಖರ್, ಬಿ.ಕೆ.ಅನಿತಾ, ಗಿರಿಜಾ, ರಂಗಸ್ವಾಮಿ, ಎಂ.ವೆಂಕಟಾಚಲ, ಮೋಹನ್‌ಕುಮಾರ್, ಜೆ.ಹರೀಶ್ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಎಂ.ಎಸ್.ರಮೇಶ್ ಚುನಾಯಿತರಾದರು.

ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಅಧಿಕಾರಿ ಆರ್.ನಿರ್ಮಲಾ ಅವರು ಚುನಾವಣಾ ಪ್ರಕ್ರಿಯೆ ನಡೆಸಿ ಸಂಜೆ ಫಲಿತಾಂಶ ಪ್ರಕಟಿಸಿದರು.

ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ರೈತಸಂಘ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ವಿತರಿಸ ಸಂಭ್ರಮಿಸಿದರು.

ಚುನಾಯಿತರಾದ ಕಾಂಗ್ರೆಸ್ ಮತ್ತು ರೈತಸಂಘ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ನಾಯಕಿ ಸುನೀತಾ ಪುಟ್ಟಣ್ಣಯ್ಯ, ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಎಸ್.ದಯಾನಂದ್, ರೈತಸಂಘ ತಾಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್ ಅಭಿನಂದನೆ ಸಲ್ಲಿಸಿದರು.

--------a

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net