

ನವದೆಹಲಿ: ಜ್ಯೋತಿರಾದಿತ್ಯ ಸಿಂಧ್ಯಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಜ್ಯೋತಿರಾದಿತ್ಯ ಸಿಂಧ್ಯಾ ಅವರ ರಾಜೀನಾಮೆ ಪತ್ರದ ಮೇಲೆ ಮಾ.9 ಎಂದು ದಿನಾಂಕ ನಮೂದಾಗಿದ್ದು ಇಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.
ಅದಾದ ಕೆಲವೇ ಹೊತ್ತಲ್ಲಿ ಕಾಂಗ್ರೆಸ್, ಜ್ಯೋತಿರಾದಿತ್ಯ ಸಿಂಧ್ಯಾ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣ, ಅವರನ್ನು ಉಚ್ಚಾಟನೆ ಮಾಡಲು ಎಐಸಿಸಿ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ ಎಂದು ಐಎನ್ಸಿ ಸಂದೇಶ್ ಎಂಬ ಅಧಿಕೃತ ಟ್ವಿಟರ್ ಅಕೌಂಟ್ ಮೂಲಕ ಹೇಳಿಕೆ ಬಿಡುಗಡೆ ಮಾಡಿದೆ.