ಎರಡು ಬಾರಿ ಹೃದಯಾಘಾತದಿಂದ ಪಾರಾಗಿದ್ದ ಕಾಂಗ್ರೆಸ್​ನ ಮಾಜಿ ಶಾಸಕ 3ನೇ ಬಾರಿ ವಿಧಿವಶ

Ex MLA Venkataswamy
ಕಾಂಗ್ರೆಸ್​ ಮಾಜಿ ಶಾಸಕ ವೆಂಕಟಸ್ವಾಮಿ
Published on

ಬೆಂಗಳೂರು: ತೀವ್ರ ಹೃದಯಾಘಾತದಿಂದ ಕಾಂಗ್ರೆಸ್​ನ ಮಾಜಿ ಶಾಸಕ ವೆಂಕಟಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಮೂರನೇ ಬಾರಿ ವಿಫಲ

ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆನೋವು ಬಂದಿತ್ತು. ಕಳೆದ ಎರಡು ಬಾರಿ ಆಸ್ವತ್ರೆಗೆ ಸೇರಿಸಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸಿದ್ದರು. ಇದೀಗ ಮೂರನೇ ಬಾರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೈತಪ್ಪಿದ ಕಾಂಗ್ರೆಸ್​ ಟಿಕೆಟ್​

ಮಾಜಿ ಶಾಸಕ ವೆಂಕಟಸ್ವಾಮಿ ಅವರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಈ‌ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್​ ಟಿಕೇಟ್ ಸಿಗುತ್ತದೆ ಅಂತ ಕ್ಷೇತ್ರದಲ್ಲಿ ಭರ್ಜರಿ ಮತಬೇಟೆ ನಡೆಸಿದ್ದರು. ಆದರೆ, ಟಿಕೆಟ್ ಕೈ ತಪ್ಪಿದ ಕಾರಣ ಬೇಸರಗೊಂಡಿದ್ದರು. ಆದರೂ ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಸಾದಹಳ್ಳಿಯ ಮನೆ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾದಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಲವು ಕೈ ನಾಯಕರು ಅಂತಿಮ ದರ್ಶನಕ್ಕೆ ಆಗಮಿಸುವ ಸಾಧ್ಯತೆ ಇದೆ.

ಅಂದಹಾಗೆ ವೆಂಕಟಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. ಕುಟುಂಬದ ಹಿರಿಯನನ್ನು ಕಳೆದುಕೊಂಡಿರುವ ಕುಟುಂಬ ದುಃಖ ಸಾಗರದಲ್ಲಿ ಮುಳುಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net