ಪಶ್ಚಿಮ ಬಂಗಾಳ ಚುನಾವಣೆ : ಎಡಕ್ಕೆ ವಾಲಿದ 'ಕೈ' ಕಮಾಂಡ್

Youth Congress 9-09
Published on

ಕೋಲ್ಕತ: ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆ ಸಂಬಂಧಿತ ಮಹತ್ವದ ಬೆಳವಣಿಗೆಯೊಂದರಲ್ಲಿ ಎಡ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದಾಗಿ ಕಾಂಗ್ರೆಸ್ ಪಕ್ಷ ಗುರುವಾರ ಘೋಷಿಸಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್​-ಮೇ ತಿಂಗಳ ಅವಧಿಯಲ್ಲಿ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಈ ವಿಷಯ ಬಹಿರಂಗಗೊಳಿಸಿದ್ದು, ಮುಂಬರುವ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಕ್ಕೆ ಪಕ್ಷದ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಚುನಾವಣೆ ಎದುರಿಸುವುದಕ್ಕೆ ಕಾಂಗ್ರೆಸ್ ಸೇರಿ ಯಾವುದೇ ಜಾತ್ಯತೀತ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಳ್ಳಲು ಕಮ್ಯೂನಿಸ್ಟ್ ಪಾರ್ಟಿ ಆಫ್​ ಇಂಡಿಯಾ (ಎಂ)ದ ಸೆಂಟ್ರಲ್ ಕಮಿಟಿ ಕಳೆದ ಅಕ್ಟೋಬರ್ ತಿಂಗಳಲ್ಲೇ ಅನುಮತಿ ನೀಡಿತ್ತು. ಇದಕ್ಕೂ ಮೊದಲು 2016ರ ಚುನಾವಾಣೆಯಲ್ಲಿ ಕಾಂಗ್ರಸ್ ಜತೆಗಿನ ಮೈತ್ರಿಯನ್ನು ಸಿಪಿಐ(ಎಂ) ನಿರಕಾರಿಸಿತ್ತು. ಇದರಲ್ಲಿ ಟಿಎಂಸಿ ಬಹುಮತ ಪಡೆದು ಅಧಿಕಾರ ಚುಕ್ಕಾಣಿ ಹಿಡಿದರೆ, ಕಾಂಗ್ರೆಸ್ 44 ಸ್ಥಾನ ಗೆದ್ದರೆ, ಎಡ ಪಕ್ಷಗಳು 32 ಸ್ಥಾನಗಳಿಗೆ ಸೀಮಿತವಾಗಿದ್ದವು. (ಏಜೆನ್ಸೀಸ್)

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net