

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ.
ಕೆಲವು ಯೋಜನೆಗಳನ್ನು ಪೂರೈಸುತ್ತೇವೆ ಎನ್ನುವ ಭರವಸೆಯನ್ನು ಸಿದ್ದರಾಮಯ್ಯ ಅವರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ನೀಡಿದ ಎಲ್ಲಾ ಭರವಸೆ ಹಾಗೂ ಕೆಲವು ಯೋಜನೆಯನ್ನು ಜಾರಿಗೆ ತರಲು ಆರ್ಥಿಕ ಪರಿಸ್ಥಿತಿಯನ್ನು ಉತ್ತಮವಾಗಿ ನೋಡಿಕೊಳ್ಳುವ ಹಿತ ದೃಷ್ಟಿಯಿಂದ ಮೂರು ಇಲಾಖೆಗಳಿಂದ ತೆರಿಗೆ ಸಂಗ್ರಹಿಸುವ ಗುರಿಯನ್ನು ಹೊಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಈ ಮೂರು ಇಲಾಖೆಗಳಿಂದ 1,62,000ಕೋಟಿ ರೂ. ತೆರಿಗೆ ಹಣ ಸಂಗ್ರಹದ ಗುರಿಯನ್ನು ನೀಡಿದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ ರೂ., ಅಬಕಾರಿ ಇಲಾಖೆಯಿಂದ 26,000 ಕೋಟಿ ರೂ. ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ 25,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಹೊಂದಿದೆ.