KPSC ಅಭ್ಯರ್ಥಿಗಳ ಮೇಲೆ ಕಾಂಗ್ರೆಸ್​ ಸರ್ಕಾರ ಸೇಡು ತೀರಿಸಿಕೊಂಡಿದೆ: ಆರ್.ಅಶೋಕ ವಾಗ್ದಾಳಿ

dk - 2025-05-03T204225.578
Published on

KPSC ಅನ್ಯಾಯದ ವಿರುದ್ಧ ಕೋರ್ಟ್ ಮೆಟ್ಟಲೇರಿದ್ದ ಅಭ್ಯರ್ಥಿಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಈ ಪಾಪಿ ಕಾಂಗ್ರೆಸ್ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ಆರ್​.ಅಶೋಕ, '' ಕೆಪಿಎಸ್​​ಸಿ ಪೂರ್ವಭಾವಿ ಪರೀಕ್ಷೆಯಲ್ಲಿನ ಭಾಷಾಂತರ ಎಡವಟ್ಟಿನಿಂದ ಅನ್ಯಾಯಕ್ಕೊಳಗಾಗಿದ್ದ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿ, ಮೇ 3ರಿಂದ ಅಂದರೆ ಇಂದಿನಿಂದ ಆರಂಭವಾಗುವ ಮುಖ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಅನುಮತಿ ಪಡೆದಿದ್ದರೆ, ಅವರಿಗೆ ಹಾಲ್ ಟಿಕೆಟ್ ಕೊಡಲು ಸತಾಯಿಸಿ ಸೇಡು ತೀರಿಸಿಕೊಳ್ಳುತ್ತಿದೆ ಈ ಪಾಪಿ ಕಾಂಗ್ರೆಸ್​ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಒಂದು ಕಡೆ ಧೋ ಎಂದು ಸುರಿಯುತ್ತಿರುವ ಮಳೆ, ಮತ್ತೊಂದು ಕಡೆ ಅರ್ಜಿ ತುಂಬಲು ಯಾವ ದಾಖಲಾತಿಗಳು ಬೇಕೆ ಎನ್ನುವ ಗೊಂದಲ, ಹತ್ತಿರದಲ್ಲಿ ಒಂದು ಜೆರಾಕ್ಸ್ ಅಂಗಡಿ ಇಲ್ಲ, ಕುಡಿಯೋಕೆ ನೀರಿಲ್ಲ, ಕಾಫಿ ತಿಂಡಿಗೆ ಒಂದು ಹೋಟೆಲ್ ಇಲ್ಲ, ಹೆಣ್ಣುಮಕ್ಕಳಿಗೆ ಶೌಚಾಲಯವಿಲ್ಲ, ಹಸುಗೂಸುಗಳಿಗೆ ಹಾಲುಣಿಸೋಕೆ ಜಾಗ ಇಲ್ಲ, ಮಧ್ಯರಾತ್ರಿ ಆದರೂ ಹಾಲ್ ಟಿಕೆಟ್ ಕೈಗೆ ಸಿಕ್ಕಿಲ್ಲ, ಬೆಳಗಾದರೆ ಪರೀಕ್ಷೆ, ಇಂತಹ ಅವಾಂತರದ ನಡುವೆ ಪಾಪ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಹಿತಾಸಕ್ತಿ ಕಾಪಡುವುದಾಗಿ ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಬೇರೆ ದಾರಿ ಇಲ್ಲದೆ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿ ಆದೇಶ ತಂದರೆ ಹಾಲ್ ಟಿಕೆಟ್ ಕೊಡಲು ಸತಾಯಿಸಿ ನೆಮ್ಮದಿಯಾಗಿ ಪರೀಕ್ಷೆ ಬರೆಯಲೂ ತೊಂದರೆ ಮಾಡಿದ್ದೀರಿ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net